Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಸಂಪಾದಕೀಯ
  4. ಬರಪೀಡಿತ ರಾಜ್ಯಕ್ಕೆ ಬರಿಗೈಲಿ ಬಂದು...

ಬರಪೀಡಿತ ರಾಜ್ಯಕ್ಕೆ ಬರಿಗೈಲಿ ಬಂದು ಹೋದರು

ವಾರ್ತಾಭಾರತಿವಾರ್ತಾಭಾರತಿ13 Feb 2024 9:13 AM IST
share
ಬರಪೀಡಿತ ರಾಜ್ಯಕ್ಕೆ ಬರಿಗೈಲಿ ಬಂದು ಹೋದರು

ಕೆಳಗಿನ ► ಪ್ಲೇ ಬಟನ್ ಕ್ಲಿಕ್ ಮಾಡಿ ಸಂಪಾದಕೀಯದ ಆಡಿಯೋ ಆಲಿಸಿ

ಮುಂಗಾರು ಮತ್ತು ಹಿಂಗಾರು ಮಳೆಯ ಕೊರತೆಯ ಪರಿಣಾಮವಾಗಿ ಕರ್ನಾಟಕ ಹಿಂದೆಂದೂ ಕಂಡರಿಯದ ಭೀಕರ ಬರಗಾಲದ ಸುಳಿಗೆ ಸಿಲುಕಿದೆ. ಇದು 122 ವರ್ಷಗಳಲ್ಲೇ ಮೂರನೆಯ ಅತಿ ಕೆಟ್ಟ ಬರಗಾಲವೆಂದು ಹೇಳಲಾಗುತ್ತಿದೆ.ಇದರ ಪರಿಣಾಮವಾಗಿ ಅಂತರ್ಜಲ ಬತ್ತಿ ಹೋಗಿ 200 ತಾಲೂಕುಗಳಲ್ಲಿ ಬೋರ್‌ವೆಲ್‌ಗಳೂ ಬರಿದಾಗಿವೆ. 7,082 ಹಳ್ಳಿಗಳು ಸಂಕಷ್ಟಕ್ಕೊಳಗಾಗಿವೆ.ಇಂಥ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಲ್ಲಿನ ಹಣವನ್ನು ರಾಜ್ಯ ಸರಕಾರ ಬಳಸಬೇಕು. ಪರಿಹಾರ ಕಾರ್ಯಗಳಿಗೆ ಈ ಮೊತ್ತವು ಸಾಲದಿದ್ದರೆ ಕೇಂದ್ರ ಸರಕಾರದ ವಿಪತ್ತು ನಿರ್ವಹಣಾ ನಿಧಿಯಿಂದ ನೆರವು ಕೇಳಬೇಕಾಗುತ್ತದೆ. ರಾಜ್ಯ ಸರಕಾರ ಬರಗಾಲದ ದುಷ್ಪರಿಣಾಮವನ್ನು ಎದುರಿಸಲು ವಿವಿಧ ಪರಿಹಾರ ಕಾರ್ಯಗಳಿಗಾಗಿ ಈಗಾಗಲೇ 81,171 ಕೋಟಿ ರೂಪಾಯಿ ನೆರವನ್ನು ಕೋರಿದೆ. ನೆರವಿಗೆ ಮನವಿ ಮಾಡಿಕೊಂಡು ಹಲವಾರು ತಿಂಗಳು ಗತಿಸಿದರೂ ಕೇಂದ್ರ ಸರಕಾರ ಯಾವುದೇ ಮನವಿಗೆ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ಸರಕಾರದ ಆರೋಪದಲ್ಲಿ ಹುರುಳಿಲ್ಲದಿಲ್ಲ.

ಈ ಸಂದರ್ಭದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ರವಿವಾರ ಮೈಸೂರಿಗೆ ಬಂದಿದ್ದರು. ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.ಅಯೋಧ್ಯೆಯಲ್ಲಿ ಸುತ್ತೂರು ಮಠದ ಶಾಖೆಯ ಸ್ವಾಮಿಗಳ ತೀರ್ಮಾನವನ್ನು ಸ್ವಾಗತಿಸಿ ಮಾತಾಡಿದರು. ಸ್ವಾಮೀಜಿಗಳೂ ಅಮಿತ್ ಶಾ ಅವರನ್ನು ವಲ್ಲಭಭಾಯಿ ಪಟೇಲರಿಗೆ ಹೋಲಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿ ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ ಎಂದು ಶ್ಲಾಘಿಸಿದರು.ಇದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವಂತೆ ಮಾಡಲು ತಮ್ಮ ಪಕ್ಷದ ನಾಯಕರಿಗೆ ಅಮಿತ್ ಶಾ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದರು. ಆದರೆ ಬರಗಾಲದ ಬವಣೆಯ ಬಗ್ಗೆ, ಕೇಂದ್ರ ಸರಕಾರ ನೆರವು ಕೊಡುವ ಬಗ್ಗೆ ಅವರು ಮಾತಾಡಲಿಲ್ಲ.

ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡುವಾಗಲೂ ಕರ್ನಾಟಕ ತೆರಿಗೆಯಲ್ಲಿ ನ್ಯಾಯವಾದ ಪಾಲನ್ನು ಕೇಳುವುದೇ ಅಪರಾಧ ಎಂಬಂತೆ ಮಾತನಾಡಿದರು. ಇನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಅಡಿಯಲ್ಲಿ ಕರ್ನಾಟಕಕ್ಕೆ ಕೊಡಲು ಯಾವ ಬಾಕಿಯೂ ಇಲ್ಲವೆಂದು ಹೇಳಿದರು. ನಿರ್ಮಲಾ ಸೀತಾರಾಮನ್ ಜನರ ದಿಕ್ಕು ತಪ್ಪಿಸುವ ಇಂಥ ಹೇಳಿಕೆಯನ್ನು ನೀಡಬಾರದಿತ್ತು. ಯಾವುದೇ ರಾಜ್ಯದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್‌ಡಿಆರ್‌ಎಫ್ ) ಅಡಿಯಲ್ಲಿ ಪರಿಹಾರ ಕೋರುವುದು ಆಯಾ ರಾಜ್ಯ ಸರಕಾರಗಳ ಸಾಂವಿಧಾನಿಕ ಹೊಣೆಗಾರಿಕೆ. ಇದಕ್ಕೆ ಸ್ಪಂದಿಸಿ ನೆರವು ನೀಡುವುದು ಕೇಂದ್ರದ ಕರ್ತವ್ಯ. ನಿರ್ಮಲಾ ಸೀತಾರಾಮನ್ ಅವರು ಬಾಕಿ ಇಲ್ಲ ಎಂಬ ಜಾರಿಕೊಳ್ಳುವ ಉತ್ತರ ನೀಡುವ ಬದಲಾಗಿ ಕರ್ನಾಟಕದ ಮನವಿಯನ್ನು ತಿರಸ್ಕರಿಸುವುದಾಗಿ ಬಹಿರಂಗವಾಗಿ ಹೇಳಲಿ. ಇನ್ನು ಕರ್ನಾಟಕದ ಬಿಜೆಪಿ ಸಂಸದರು ಮತ್ತು ಶಾಸಕರು ಬರಗಾಲದ ಈ ಸಂದರ್ಭದಲ್ಲಿ ರಾಜ್ಯದ ಜನತೆಯ ಪರವಾಗಿ ನಿಲ್ಲದೆ ರಾಜ್ಯ ಸರಕಾರದ ವಿರುದ್ಧ ಟೀಕೆ ಮಾಡುವುದು ಸರಿಯಲ್ಲ.

ವಾಸ್ತವವಾಗಿ ಎನ್‌ಡಿಆರ್‌ಎಫ್ ಅಡಿಯಲ್ಲಿ ರಾಜ್ಯಗಳಿಗೆ ಪರಿಹಾರವನ್ನು ಮಂಜೂರು ಮಾಡುವ ಸಮಿತಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಧ್ಯಕ್ಷರು. ರಾಜ್ಯ ಸರಕಾರ ಕಳೆದ ನಾಲ್ಕೂವರೆ ತಿಂಗಳಿಂದ ಪದೇ ಪದೇ ಮನವಿ ಮಾಡುತ್ತಿದ್ದರೂ ಸದರಿ ಸಮಿತಿಯ ಸಭೆಯನ್ನು ಕೂಡ ನಡೆಸಿಲ್ಲ. ರವಿವಾರ ಕರ್ನಾಟಕಕ್ಕೆ ಬಂದಾಗಲಾದರೂ ಅಮಿತ್ ಶಾ ಕರ್ನಾಟಕದ ಬರ ಪೀಡಿತ ಪರಿಸ್ಥಿತಿಗೆ ಸ್ಪಂದಿಸಿ ಬರ ಪರಿಹಾರ ಘೋಷಣೆ ಮಾಡಬೇಕಾಗಿತ್ತು. ಆದರೆ ಅದಾವುದನ್ನೂ ಮಾಡದೆ ಒಣ ಉಪದೇಶ ಮಾಡಿ ವಾಪಸಾಗಿದ್ದಾರೆ.

ಬರಗಾಲದಂಥ ನೈಸರ್ಗಿಕ ಪ್ರಕೋಪದ ಪರಿಸ್ಥಿತಿಯಲ್ಲಿ ಕೇಂದ್ರ ಸರಕಾರ ನೆರವು ನೀಡುವಾಗ ಪಕ್ಷ ರಾಜಕಾರಣ ಅಡ್ಡಿಯಾಗಬಾರದು. 2009ರಲ್ಲಿ ಇದೇ ರೀತಿ ರಾಜ್ಯದಲ್ಲಿ ಭೀಕರ ಬರಗಾಲ ಉಂಟಾಗಿತ್ತು. ಆಗ ರಾಜ್ಯದಲ್ಲಿ ಬಿಜೆಪಿ ಸರಕಾರವಿತ್ತು. ಆಗಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಬರಗಾಲದ ಪರಿಸ್ಥಿತಿಯನ್ನು ವೀಕ್ಷಿಸಲು ಕರ್ನಾಟಕಕ್ಕೆ ಭೇಟಿ ನೀಡಿದ್ದರು. ಪರಿಸ್ಥಿತಿ ವೀಕ್ಷಿಸಲು ಬಂದ ದಿನವೇ ತಕ್ಷಣದ ಪರಿಹಾರ ಎಂದು 1,000 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರು. ಇದು ಪ್ರಬುದ್ಧ ರಾಜಕೀಯ ನಿಲುವು. ಬಹುಪಕ್ಷೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜ್ಯಗಳಲ್ಲಿ ವಿಭಿನ್ನ ಪಕ್ಷಗಳ ಸರಕಾರಗಳು ಅಸ್ತಿತ್ವದಲ್ಲಿರುತ್ತವೆ. ಕೇಂದ್ರದಲ್ಲಿ ಇನ್ನೊಂದು ಪಕ್ಷ ಅಧಿಕಾರದಲ್ಲಿ ಇರುತ್ತದೆ. ಇಂಥ ಸಂದರ್ಭದಲ್ಲಿ ನೆರವು ಘೋಷಿಸಲು ಸಂಕುಚಿತ ರಾಜಕೀಯ ಅಡ್ಡಿಯಾಗಬಾರದು.

ಇದು ಇನ್ನೂ ಫೆಬ್ರವರಿ ತಿಂಗಳು. ಮುಂದಿನ ನಾಲ್ಕು ತಿಂಗಳ ಕಾಲಾವಧಿಯಲ್ಲಿ ಬಿಸಿಲಿನ ತಾಪ ಇನ್ನೂ ಹೆಚ್ಚಾಗಲಿದೆ, ಅಂತರ್ಜಲ ಪ್ರಮಾಣ ಇನ್ನಷ್ಟು ಕುಸಿಯಲಿದೆ. ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವುದೆಂದು ವರದಿಗಳು ತಿಳಿಸಿವೆ. ಇದೇ ಕಾಲಾವಧಿಯಲ್ಲಿ ಲೋಕಸಭಾ ಚುನಾವಣೆಯೂ ನಡೆಯಲಿದೆ. 2024ರ ಎಪ್ರಿಲ್ ವೇಳೆಗೆ ಮುಂಗಾರು ಪೂರ್ವ ಮಳೆ ಬೀಳದಿದ್ದರೆ ಬರಗಾಲದ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಜನ, ಜಾನುವಾರುಗಳಿಗೆ ಕುಡಿಯಲು ನೀರು ಸಿಗದಂಥ ಪರಿಸ್ಥಿತಿ ನಿರ್ಮಾಣವಾಗಲಿದೆ. ಜನ ಅನ್ನ ಮತ್ತು ನೀರಿಗಾಗಿ ಬೇರೆ ರಾಜ್ಯಗಳಿಗೆ ಗುಳೆ ಹೋಗಬೇಕಾಗುತ್ತದೆ. ಹಾಗಾಗಿ ಇನ್ನಾದರೂ ಕೇಂದ್ರ ಸರಕಾರ ನೆರವಿಗೆ ಮುಂದಾಗಲಿ.

ಇಂಥ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ನಾಯಕರು ತಮ್ಮದೇ ಪಕ್ಷದ ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಬರಗಾಲ ಪರಿಹಾರದ ನೆರವು ಬಿಡುಗಡೆ ಮಾಡಿಸುವ ಬದಲು ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಟೀಕೆಯಲ್ಲಿ ಕಾಲ ಹರಣ ಮಾಡುತ್ತಿದ್ದಾರೆ. ಬಡವರ, ಮಹಿಳೆಯರ ಬಲವರ್ಧನೆಗೆ ಯೋಜನೆ ರೂಪಿಸಿದರೆ ತಪ್ಪೇನು? ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರಕಾರ ದೇಶದ ಕೇವಲ ಒಂದು ಸಾವಿರ ಮಂದಿ ಕೋಟ್ಯಧೀಶರ ರೂ. 1.75 ಲಕ್ಷ ಕೋಟಿಯಷ್ಟು ಬ್ಯಾಂಕ್ ಸಾಲವನ್ನು ಮನ್ನಾ ಮಾಡಿರುವುದಕ್ಕೆ ಇವರ ಬಳಿ ಯಾವ ಉತ್ತರವಿದೆ? ಇನ್ನಾದರೂ ತಮ್ಮ ದಿಲ್ಲಿಯ ನಾಯಕರನ್ನು ಓಲೈಸುವ ಇಂಥ ಹೇಳಿಕೆಗಳನ್ನು ಕೊಡುವುದನ್ನು ನಿಲ್ಲಿಸಲಿ.

ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಾತ್ರವಲ್ಲ ಬಿಜೆಪಿ ನಾಯಕರೂ ಜನರ ಬಳಿ ಹೋಗಬೇಕಾಗುತ್ತದೆ. ಭೀಕರ ಬರಗಾಲದಿಂದ ಕುಡಿಯುವ ನೀರಿಗೆ ತಹ ತಹಿಸುತ್ತಿರುವ ಜನರಿಗೆ ಅಯೋಧ್ಯೆಯ ಮಂದಿರ ತೋರಿಸಿ ವೋಟು ಕೇಳಲು ಆಗುವುದಿಲ್ಲ. ಹಾಗಾಗಿ ಈಗಲಾದರೂ ಸಂಕುಚಿತ ಪಕ್ಷ ರಾಜಕಾರಣನ್ನು ಬದಿಗೊತ್ತಿ ಕಷ್ಟದಲ್ಲಿರುವ ರಾಜ್ಯದ ಜನರ ನೆರವಿಗೆ ಬರಲಿ. ರಾಜ್ಯಕ್ಕೆ ಬರ ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ತರಲಿ. ರಾಜ್ಯದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ ಸರ್ವಪಕ್ಷಗಳ ನಾಯಕರ ನಿಯೋಗವನ್ನು ದಿಲ್ಲಿಗೆ ಕರೆದುಕೊಂಡು ಹೋಗಿ ಕೇಂದ್ರ ಸರಕಾರದ ಮೇಲೆ ಇನ್ನಷ್ಟು ಒತ್ತಡ ತರಲಿ. ರಾಜ್ಯದ ಜನತೆಗೆ ಬರಗಾಲದ ಭೀಕರತೆಯಿಂದ ತೊಂದರೆಯಾಗದಂತೆ ನೋಡಿಕೊಳ್ಳಲಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X