Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ವೈದ್ಯರು ಮತ್ತು ರೋಗಿಯ ನಡುವಿನ ಬಾಂಧವ್ಯ...

ವೈದ್ಯರು ಮತ್ತು ರೋಗಿಯ ನಡುವಿನ ಬಾಂಧವ್ಯ ಶಿಥಿಲವಾಗದಿರಲಿ

ಇಂದು ರಾಷ್ಟ್ರೀಯ ವೈದ್ಯರ ದಿನ

ಡಾ. ಮುರಲೀ ಮೋಹನ್ ಚೂಂತಾರುಡಾ. ಮುರಲೀ ಮೋಹನ್ ಚೂಂತಾರು1 July 2025 11:02 AM IST
share
ವೈದ್ಯರು ಮತ್ತು ರೋಗಿಯ ನಡುವಿನ ಬಾಂಧವ್ಯ ಶಿಥಿಲವಾಗದಿರಲಿ

ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಮತ್ತು ಮಾನವೀಯ ಸಂಬಂಧಗಳು ನಶಿಸುತ್ತಿರುವ ಈ ಕಾಲಘಟ್ಟದಲ್ಲಿ ವೈದ್ಯ ಮತ್ತು ರೋಗಿ ಸಂಬಂಧ ಮೊದಲಿನಂತೆ ಉಳಿದಿಲ್ಲ. ‘ವೈದ್ಯರೇ ದೇವರು’ ಎಂಬ ಮಾತು ಈಗ ಬಹುಶಃ ಎಲ್ಲ ವೈದ್ಯರಿಗೂ ಅನ್ವಯಿಸಲಾರದು. ಅದೇ ರೀತಿ, ಇಂದಿನ ರೋಗಿಗಳು ಕೂಡ ವೈದ್ಯರನ್ನು ಪೂರ್ತಿ ವಿಶ್ವಾಸದಿಂದ ನೋಡುವ ಸ್ಥಿತಿಯಿಲ್ಲಿಲ್ಲ. ತಮ್ಮ ವೃತ್ತಿ ಜೀವನ ಏಳು ಬೀಳುಗಳತ್ತ ದೃಷ್ಟಿ ಹರಿಸಿ ತನ್ನ ತಪ್ಪು ಒಪ್ಪುಗಳನ್ನು ಪುನರ್ ವಿಮರ್ಶಿಸಿಕೊಂಡು ಸಾಧನೆ ಮಜಲುಗಳತ್ತ ಹಿನ್ನೋಟ ಬೀರಿ, ತನ್ನ ತನು-ಮನ-ಧನಗಳನ್ನು ತನ್ನ ವೃತ್ತಿಗೆ ಪುನಃ ಅರ್ಪಿಸಿಕೊಳ್ಳುವ ಸುದಿನ.

ಜುಲೈ 1, 1882ರಂದು ಭಾರತ ಕಂಡ ಮಹಾನ್ ವೈದ್ಯ, ಪ್ರಾಮಾಣಿಕ ರಾಜಕಾರಣಿ ಅಪ್ರತಿಮ ದೇಶಸೇವಕ ಮತ್ತು ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಶಿಕ್ಷಣ ತಜ್ಞ ಡಾ. ಬಿದನ್ ಚಂದ್ರ ರಾಯ್ ಜನ್ಮದಿನ. ಈ ಮಹಾನ್ ಚೇತನದ ನೆನಪಿನ ಕುರುಹಾಗಿ ದೇಶದಾದ್ಯಂತ ಜುಲೈ 1ರಂದು ವೈದ್ಯರ ದಿನ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಮಾರು 80 ವರ್ಷಗಳ ಕಾಲ ತುಂಬು ಜೀವನ ನಡೆಸಿದ ಡಾ. ಬಿ.ಸಿ. ರಾಯ್ ಜೀವನದುದ್ದಕ್ಕೂ ಸರಳ ಮತ್ತು ಉದಾತ್ತ ಜೀವನ ನಡೆಸಿ ಬಡವರ, ನೊಂದ ಜೀವಗಳ ಸಾಂತ್ವನಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. Poor are my patients, god pays for them ಎಂಬಂತೆ ಯಾವತ್ತೂ ಬಡವರಿಗೆ ಉಚಿತ ಚಿಕಿತ್ಸೆ ನೀಡಿ ಮಾನವೀಯತೆಯನ್ನು ಜೀವನ ಪರ್ಯಂತ ಮೆರೆದರು. ಗಾಂಧೀಜಿಯವರ ಜೀವನ ಆದರ್ಶಗಳಿಂದ ಬಹಳಷ್ಟು ಪ್ರಭಾವಿತರಾಗಿದ್ದ ಅವರು ಬಡವರ ಉದ್ಧಾರಕ್ಕಾಗಿ ಸದಾ ಶ್ರಮಿಸುತ್ತಿದ್ದರು. ಬಡವರಿಗಾಗಿ ಬಂಗಾಳದ ಕೋಲ್ಕತಾದಲ್ಲಿ ಆಸ್ಪತ್ರೆಯನ್ನು ತೆರೆದರು. ಕೋಲ್ಕತಾದಲ್ಲಿ ಪ್ರಾಥಮಿಕ ವೈದ್ಯಕೀಯ ಶಿಕ್ಷಣದ ಬಳಿಕ ಇಂಗ್ಲೆಡ್‌ನಲ್ಲಿ ಉನ್ನತ ಶಿಕ್ಷಣ (MRCP, FRCS) ಪಡೆದ ಬಳಿಕ ತಾಯ್ನಾಡಿನ ಸೆಳೆತಕ್ಕೊಳಗಾಗಿ ಭಾರತಕ್ಕೆ ಹಿಂದಿರುಗಿದರು. ತಾವು ನಂಬಿದ ತತ್ವಾದರ್ಶ, ಧ್ಯೇಯಗಳನ್ನು ಬಲಿಗೊಡದೆ ವೈದ್ಯಕೀಯ ವೃತ್ತಿಯನ್ನು ಪ್ರಾಮಾಣಿವಾಗಿ ನಡೆಸಿ ಇತರರಿಗೂ ಆದರ್ಶಪ್ರಾಯರಾದರು. ಸ್ವಾತಂತ್ರ್ಯಾನಂತರದ ದಿನಗಳಲ್ಲಿ ಗಾಂಧೀಜಿಯವರ ಒತ್ತಾಯದಿಂದಾಗಿ ರಾಜಕೀಯ ಪ್ರವೇಶಿಸಿ 1948ರಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿದರು. ಮುಖ್ಯಮಂತ್ರಿಯಾದ ಬಳಿಕವೂ ಹಲವಾರು ಆಸ್ಪತ್ರೆಗಳನ್ನು ತೆರೆದು ಬಡವರಿಗೆ ಉಚಿತ ಚಿಕಿತ್ಸೆಯನ್ನು ನೀಡಿದರು. ಹಲವಾರು ಶಿಕ್ಷಣ ಸಂಸ್ಥೆಗಳನ್ನು ತೆರೆದು ಉಚಿತ ಶಿಕ್ಷಣವನ್ನು ನೀಡಿಸಿದರು. ಹೀಗೆ ರಾಜಕೀಯ, ವೈದ್ಯಕೀಯ, ಶಿಕ್ಷಣ, ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಗಾಂಧೀಜಿ ಕಂಡ ರಾಮರಾಜ್ಯದ ಕನಸನ್ನು ನನಸಾಗಿಸಲು ಜೀವನ ಪರ್ಯಂತ ತಮ್ಮ ಬದುಕನ್ನು ಸವೆಸಿದರು. ಹೀಗೆ 80 ವರ್ಷಗಳ ತುಂಬು ಜೀವನ ನಡೆಸಿ 1962ರ ಜುಲೈ 1ರಂದು ನಿಧನರಾದರು. ಅವರ ಅಪ್ರತಿಮ ಸೇವೆಗಾಗಿ ಭಾರತ ಸರಕಾರ 1961ರಲ್ಲಿ ಭಾರತ ರತ್ನ ನೀಡಿ ಗೌರವಿಸಿತ್ತು. 1976ರಿಂದ ವೈದ್ಯಕೀಯ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ವೈದ್ಯರಿಗಾಗಿ ಬಿ.ಸಿ.ರಾಯ್ ಪ್ರಶಸ್ತಿಯನ್ನು ಆರಂಭಿಸಲಾಯಿತು. ಇದು ವೈದ್ಯಕೀಯ ಕ್ಷೇತ್ರದ ಪರಮೋಚ್ಚ ಪ್ರಶಸ್ತಿ ಎಂದರೂ ತಪ್ಪಲ್ಲ. ಇಂತಹ ಮಹಾನ್ ಚೇತನದ ನೆನಪಿಗಾಗಿ ದೇಶದ್ಯಾಂತ ಜುಲೈ 1ರಂದು ವೈದರ ದಿನ ಎಂದು ಆಚರಿಸಲಾಗುತ್ತದೆ. ಹಾಗೆಯೇ ದೇಶಾದ್ಯಂತ ವೈದ್ಯ ಬಂಧುಗಳು ತಮ್ಮ ವೃತ್ತಿ ಜೀವನ ಮಜಲುಗಳತ್ತ ದೃಷ್ಟಿ ಹಾಯಿಸಿಕೊಂಡು ತಪ್ಪನ್ನು ತಿದ್ದಿಕೊಂಡು ಆತ್ಮಾವಲೋಕನ ಮಾಡಿಕೊಂಡು ಮಾನವಕುಲದ ಸೇವೆಗೆ ತಮ್ಮನ್ನು ಮಗದೊಮ್ಮೆ ಸಮರ್ಪಿಸಿಕೊಳ್ಳುವ ದಿನವಾಗಿದೆ ಇಂದು. ಹಾಗೆಯೇ ದೇಹದ ಆರೋಗ್ಯದಲ್ಲಿ ಏರುಪೇರು ಆದಾಗ, ಜೀವನ್ಮರಣದ ನಡುವೆ ಬದುಕಲು ಹೆಣಗಾಡುತ್ತಿರುವಾಗ ಧೈರ್ಯ, ಆತ್ಮವಿಶ್ವಾಸ ತುಂಬಿ, ನೋವು ಶಮನಗೊಳಿಸಿ ಹೊಸ ಜೀವನಕ್ಕೆ ಅನುವು ಮಾಡಿ ಕೊಡುವ ತಮ್ಮ ನೆಚ್ಚಿನ ವೈದ್ಯರನ್ನು ಜನತೆ ನೆನಪಿಸಿಕೊಳ್ಳುವ ಮತ್ತು ಆದರಿಸುವ ದಿನವಿದು.

ವ್ಯಾಪಾರಿ ಪ್ರವೃತ್ತಿಗೆ ಕಡಿವಾಣ ಅಗತ್ಯ

ನಮಗೆ ಸ್ವಾತಂತ್ರ್ಯ ಲಭಿಸಿ ಹಲವು ದಶಕಗಳು ಕಳೆದಿವೆ. ಕಾಲ ಬದಲಾದಂತೆ ನಮ್ಮ ಜೀವನಶೈಲಿ, ಆದರ್ಶಗಳೂ ಬದಲಾಗಿವೆ. ವೈದ್ಯಕೀಯ ಕ್ಷೇತ್ರದಲ್ಲಿ ಅದ್ಭುತ ಕ್ರಾಂತಿಗಳು, ಆವಿಷ್ಕಾರಗಳು ನಡೆದಿವೆ. ಹೊಸ ಹೊಸ ರೋಗಗಳು ಮತ್ತು ಹೊಸ ಹೊಸ ಔಷಧಿಗಳೂ ಹುಟ್ಟಿಕೊಂಡಿವೆ. ಇನ್ನೊಂದೆಡೆ ರೋಗಿ ಮತ್ತು ವೈದ್ಯರ ನಡುವಿನ ಭಾವನಾತ್ಮಕ ಸಂಬಂಧ ಶಿಥಿಲವಾಗುತ್ತಿದೆ. ಇಂದು ವೈದ್ಯಕೀಯ ಕ್ಷೇತ್ರದಲ್ಲಿ ವ್ಯಾಪಾರಿ ಮನೋಭಾವ ಹೆಚ್ಚಾಗುತ್ತಿರುವುದು ವಿಷಾದನೀಯ.

ವೈದ್ಯ ಶಿಕ್ಷಣ, ವೈದ್ಯಕೀಯ ವೃತ್ತಿ, ಸಂಶೋಧನೆಗಳೇ ಇರಲಿ ಎಲ್ಲ ಕಡೆಯೂ ಧನಬಲವೇ ವಿಜೃಂಭಿಸುತ್ತಿದೆ. ಪ್ರತಿಭೆ, ಪ್ರಾಮಾಣಿಕ ಪರಿಶ್ರಮಗಳಿಗೆ ಕಿಂಚಿತ್ತೂ ಬೆಲೆ ಸಿಗುತ್ತಿಲ್ಲ. ಇದು ಸುಂದರ, ಸ್ವಸ್ಥ ಸಮಾಜಕ್ಕೆ ಖಂಡಿತ ಮಾರಕ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಜನತೆ ಮತ್ತು ಸರಕಾರ ತ್ವರಿತಗತಿಯಲ್ಲಿ ಸ್ಪಂದಿಸಬೇಕು. ಅರ್ಹ ಪ್ರತಿಭಾವಂತರಿಗೆ ವೈದ್ಯಕೀಯ ಶಿಕ್ಷಣ ಅವಕಾಶ ದೊರೆತು, ಆರೋಗ್ಯ ಕ್ಷೇತ್ರದಲ್ಲೂ ಹೆಚ್ಚಿನ ಸಂಶೋಧನೆಗಳು ನಡೆಯಬೇಕು. ಹೊಸದಾಗಿ ಹುಟ್ಟಿಕೊಳ್ಳುತ್ತಿರುವ ರೋಗಗಳಿಗೂ ಮತ್ತು ತಲೆತಲಾಂತರಗಳಿಂದ ಬಾಧಿಸುತ್ತಿರುವ ರೋಗಗಳಿಗೂ ಕಡಿವಾಣ ಹಾಕಬೇಕು. ಔಷಧ, ಶುಶ್ರೂಷೆ ಮತ್ತು ಎಲ್ಲಾ ಪ್ರಾಥಮಿಕ ಆರೋಗ್ಯ ಸೌಲಭ್ಯಗಳು ಬಡವರ ಮನೆ ಬಾಗಿಲಿಗೆ ತಲುಪಬೇಕು. ಈ ನಿಟ್ಟಿನಲ್ಲಿ ನಿಸ್ವಾರ್ಥದಿಂದ, ಸೇವಾ ಮನೋಭಾವದಿಂದ ಹಗಲಿರುಳು ತಮ್ಮ ಜೀವನವನ್ನು ರೋಗಿಗಳ ಒಳಿತಿಗಾಗಿ ತೊಡಗಿಸಿಕೊಂಡು ವೈದ್ಯರನ್ನು ಗುರುತಿಸುವ ಕಾರ್ಯ ನಡೆಯಬೇಕು.

ರೋಗಿಗಳಿಗೂ ಒಂದೆರಡು ಕಿವಿಮಾತು. ದಯವಿಟ್ಟು ತಾಳ್ಮೆ, ಸಂಯಮ ಕಳೆದುಕೊಳ್ಳಬೇಡಿ. ವೈದ್ಯರ ಮೇಲೆ ಪೂರ್ಣ ಭರವಸೆ ಇಡಿ. ಎಲ್ಲಾ ಸಮಸ್ಯೆಗಳನ್ನು ಮುಕ್ತವಾಗಿ ವೈದ್ಯರ ಬಳಿ ತೆರೆದಿಡಿ. ವೈದ್ಯರೂ ನಿಮ್ಮಂತೆಯೇ ಇರುವ ಇನ್ನೊಂದು ಜೀವ. ಅವರಿಗೆ ಆಸೆ, ಆಕಾಂಕ್ಷೆ, ವೈಯಕ್ತಿಕ ಸಮಸ್ಯೆ, ಭಾವನೆಗಳು ಇರುತ್ತವೆ. ಅವರ ಭಾವನೆಗಳಿಗೆ, ನೋವುಗಳಿಗೂ ರೋಗಿಗಳು ಸ್ಪಂದಿಸಬೇಕು. ಹಾಗಿದ್ದಲ್ಲಿ ಮಾತ್ರ ವೈದ್ಯ ರೋಗಿಗಳ ನಡುವೆ ಸುಮಧುರ ಬಾಂಧವ್ಯ ಬೆಳೆದು ಆರೋಗ್ಯವಂತ ಸಮಾಜದ ನಿರ್ಮಾಣ ಸಾಧ್ಯ.

ಕೆಲವೊಮ್ಮೆ ರೋಗಿಗಳು ವೈದ್ಯರಿಗೆ ರೋಗದ ಬಗ್ಗೆ ಸಂಪೂರ್ಣ ಪರಾಮರ್ಶೆ ಮಾಡಲು ಕಾಲಾವಕಾಶ ನೀಡಬೇಕು. ದಿನ ಬೆಳಗಾಗುವು ದರೊಳಗೆ ಕಾಯಿಲೆ ವಾಸಿಯಾಗಬೇಕು ಎಂದು ವೈದ್ಯರ ಮೇಲೆ ಅನಗತ್ಯ ಒತ್ತಡ ಹಾಕಬೇಡಿ.

ಅನಗತ್ಯ ಪ್ರಶ್ನೆ ಕೇಳಿ ಅಂತರ್ಜಾಲದ ಮಾಹಿತಿಯನ್ನು ವೈದ್ಯರ ಬಳಿ ತಿಳಿಸಿ, ತಮ್ಮ ಅಲ್ಪ ಸ್ವಲ್ಪ ಜ್ಞಾನದಿಂದ ವೈದ್ಯರ ದಾರಿ ಕೆಡಿಸಬೇಡಿ. ಪ್ರತಿಶತ ಮೂವತ್ತರಷ್ಟು ರೋಗ, ವೈದ್ಯರ ಮೇಲಿನ ನಂಬಿಕೆಯ ತಳಹದಿಯಲ್ಲೇ ಗುಣವಾಗುತ್ತದೆ.

ದೇಹದ ರೋಗವನ್ನು ವೈದ್ಯರು ಗುಣಪಡಿಸಬಹುದು. ಆದರೆ ಸಂದೇಹ ರೋಗ ಗುಣಪಡಿಸುವುದು ವೈದ್ಯರಿಂದ ಅಸಾಧ್ಯ ಎನ್ನುವುದನ್ನು ಅರಿತುಕೊಂಡರೆ, ವೈದ್ಯರ ಕೆಲಸ ಸರಳ. ವೈದ್ಯರೂ ಆತ್ಮವಿಮರ್ಶೆ ಮಾಡಿಕೊಂಡು ತಮ್ಮ ವೃತ್ತಿ ಪಾಲಿಸಿದಲ್ಲಿ ಸುಂದರ ಸದೃಢ ಸಮಾಜ ನಿರ್ಮಾಣ ಸಾಧ್ಯ.

ವೈದ್ಯರ ಆದರ್ಶಗಳು ಇತರರಿಗೆ ಮಾದರಿಗಳು ಮೊದಲೆಲ್ಲಾ ವೈದ್ಯ ವೃತ್ತಿಯನ್ನು ಪವಿತ್ರವಾದ ವೃತ್ತಿ ಎಂದು ಕರೆಯಲಾಗುತ್ತಿತ್ತು. ಕಾಲಕ್ರಮೇಣ ಬಹಳಷ್ಟು ಬದಲಾವಣೆಗಳಾದವು. ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಕಾಲಘಟ್ಟದಲ್ಲಿ ವೈದ್ಯಕೀಯ ವೃತ್ತಿಯಲ್ಲಿಯೂ ಬಹಳಷ್ಟು ಪರಿವರ್ತನೆಯಾಯಿತು. ಮೊದಲಿದ್ದ ವೈದ್ಯ- ರೋಗಿಯ ಸಂಬಂಧ ಈಗೀಗ ಮೊದಲಿನಂತೆ ಉಳಿದಿಲ್ಲ. ಎಲ್ಲವನ್ನೂ ಸಂಶಯದ ದೃಷ್ಟಿಯಿಂದ ನೋಡುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದರಲ್ಲಿ ರೋಗಿ ಮತ್ತು ವೈದ್ಯರ ತಪ್ಪೂ ಇದೆ. ಪ್ರತೀ ವೈದ್ಯ ಮತ್ತು ರೋಗಿ ತನ್ನ ಹೊಣೆಗಾರಿಕೆ, ವೃತ್ತಿ ಧರ್ಮ ಮತ್ತು ಇತಿಮಿತಿಯೊಳಗೆ ವ್ಯವಹರಿಸಿದಲ್ಲಿ ಈ ರೀತಿಯ ಸಂಘರ್ಷ ತಪ್ಪಿಸಬಹುದು. ಅದರಲ್ಲ್‌ಯೇ ಇಬ್ಬರ ಒಳಿತು ಮತ್ತು ಸಮಾಜದ ಒಳಿತೂ ಅಡಗಿದೆ. ಸಾವು ಸಮೀಪಿಸಿದಾಗ ವೈದ್ಯ ದೇವರಾಗಿಯೂ, ಚಿಕಿತ್ಸೆ ಆರಂಭಿಸಿದಾಗ ದೇವಮಾನವನಾಗಿಯೂ, ಚಿಕಿತ್ಸೆ ಫಲಿಸಿದಾಗ ಸಾಮಾನ್ಯ ಮನುಷ್ಯನಾಗಿಯೂ, ಶುಲ್ಕ ಕೇಳಿದಾಗ ಧನದಾಹಿ ಎಂದೂ, ಚಿಕಿತ್ಸೆ ಫಲಿಸದಾಗ ಕೊಲೆಗಡುಕ ಎಂದೂ ಜನರು ವೈದ್ಯರನ್ನೂ ಹಾಡಿ ಹೊಗಳುತ್ತಾರೆ ಮತ್ತು ತೆಗಳುತ್ತಾರೆ. ಆದರೆ ಈ ಎಲ್ಲಾ ಹೊಗಳಿಕೆಗೆ ಹಿಗ್ಗದೆ ತೆಗಳಿಕೆಗೆ ಕುಗ್ಗದೆ ಸಮಚಿತ್ತದಿಂದ ವರ್ತಿಸಿ ವೃತ್ತಿ ಧರ್ಮವನ್ನು ಪಾಲಿಸಿ ರೋಗಿಯು ಗುಣಮುಖವಾಗಲು ಪ್ರಾಮಾಣಿಕವಾಗಿ ಪ್ರಯತ್ನಿಸುವವನೇ ನಿಜವಾದ ವೈದ್ಯ. ಅಂತಹ ವೈದ್ಯ ದೇವರಾಗದಿದ್ದರೂ ಮನುಷ್ಯನಾಗುವುದಂತೂ ಖಂಡಿತ ಸತ್ಯ. ಈ ರೀತಿ ತನ್ನ ವೈದ್ಯಕೀಯ ಕ್ಷೇತ್ರದಲ್ಲಿ ರೋಗಿಗಳ ಸೇವೆ ಮಾಡುತ್ತಿರುವ ಸಾವಿರಾರು ವೈದ್ಯರು ನಮ್ಮ ಸಮಾಜದಲ್ಲಿ ಇದ್ದಾರೆ. ಅವರು ಹಾಕಿದ ಆದರ್ಶ ಮತ್ತು ತತ್ವಗಳು ಇತರರಿಗೆ ಮಾದರಿಯಾಗಲಿ. ವೈದ್ಯರ ದಿನದಂದು ನನ್ನೆಲ್ಲಾ ವೈದ್ಯ ಸಹೋದ್ಯೋಗಿ ಬಂಧುಗಳಿಗೆ ಶುಭಾಶಯ ಕೋರುತ್ತೇನೆ.

share
ಡಾ. ಮುರಲೀ ಮೋಹನ್ ಚೂಂತಾರು
ಡಾ. ಮುರಲೀ ಮೋಹನ್ ಚೂಂತಾರು
Next Story
X