ಕರಾವಳಿ ಕಾವಲು ಪೊಲೀಸ್ ನೇಮಕಾತಿ 2026; ಯಾರು ಅರ್ಜಿ ಸಲ್ಲಿಸಬಹುದು?

ಸಾಂದರ್ಭಿಕ ಚಿತ್ರ
ಆಸಕ್ತ ಅಭ್ಯರ್ಥಿಗಳು ಉಡುಪಿಯ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಿ ವಿವರ ಪಡೆಯಬಹುದು.
ಉಡುಪಿಯ ಕರಾವಳಿ ಕಾವಲು ಪೊಲೀಸ್ ಶಾಖೆಯಲ್ಲಿ ಖಾಲಿ ಇರುವ ಒಟ್ಟು 30 ತಾಂತ್ರಿಕ ಸಿಬ್ಬಂದಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಭಾರತೀಯ ನೌಕಾಪಡೆ, ಕೋಸ್ಟ್ ಗಾರ್ಡ್ ಅಥವಾ ಬಿಎಸ್ಎಫ್ನ ವಾಟರ್ ವಿಂಗ್ನಿಂದ ನಿವೃತ್ತರಾದ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ನಿಖರ ವಯೋಮಿತಿ, ವಿದ್ಯಾರ್ಹತೆ, ಅನುಭವ ಹಾಗೂ ಇತರ ಷರತ್ತುಗಳ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಉಡುಪಿಯ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕರ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು ಅಥವಾ ಇಲಾಖೆಯ ವೆಬ್ ತಾಣಕ್ಕೆ ಭೇಟಿ ನೀಡಬಹುದು. ದೂರವಾಣಿ ಸಂಖ್ಯೆ: 0820-2538120, 2538150. ಫ್ಯಾಕ್ಸ್: 2535100.
📌 ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2026 ಜೂನ್ 06.
📌 ಹುದ್ದೆಯ ವಿವರ
30 ತಾಂತ್ರಿಕ ಹುದ್ದೆಗಳು
📌 ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಕರಾವಳಿ ಕಾವಲು ಪೊಲೀಸ್, ಉಡುಪಿ
ಹುದ್ದೆಗಳ ಸಂಖ್ಯೆ: 30 ಹುದ್ದೆಗಳು
ಉದ್ಯೋಗ ಸ್ಥಳ: ಉಡುಪಿ ಶಾಖೆ
📌 ಹುದ್ದೆಗಳ ಹೆಸರು
ಬೋಟ್ ಕ್ಯಾಪ್ಟನ್ – ಪೊಲೀಸ್ ಉಪನಿರೀಕ್ಷಕರು (ಪಿಎಸ್ಐ) – 02
ಸಹಾಯಕ ಬೋಟ್ ಕ್ಯಾಪ್ಟನ್ – ಸಹಾಯಕ ಪೊಲೀಸ್ ಉಪನಿರೀಕ್ಷಕರು (ಎಎಸ್ಐ) – 10
ಮೋಟಾರ್ ಲಾಂಚ್ ಮೆಕ್ಯಾನಿಕ್ – ಸಹಾಯಕ ಪೊಲೀಸ್ ಉಪನಿರೀಕ್ಷಕರು (ಎಎಸ್ಐ) – 02
ಎಂಜಿನ್ ಡ್ರೈವರ್ – ಪೊಲೀಸ್ ಹೆಡ್ ಕಾನ್ಸ್ಟೇಬಲ್ (ಎಚ್ಸಿ) – 12
ಖಲಾಸಿ – ಪೊಲೀಸ್ ಕಾನ್ಸ್ಟೇಬಲ್ (ಪಿಸಿ) – 04
📌 ಗುತ್ತಿಗೆ ಅವಧಿ
ಈ ನೇಮಕಾತಿಯು ಸಂಪೂರ್ಣ ಗುತ್ತಿಗೆ ಆಧಾರಿತವಾಗಿರುತ್ತದೆ. ಅಭ್ಯರ್ಥಿಗಳನ್ನು 5 ವರ್ಷಗಳ ಅವಧಿಗೆ ಅಥವಾ 60 ವರ್ಷ ವಯಸ್ಸಾಗುವವರೆಗೆ (ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿವರೆಗೆ) ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.






