ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳು; ಯಾರು ಅರ್ಜಿ ಸಲ್ಲಿಸಬಹುದು?

Photo Credit : hpcl.co.in
ಕೇಂದ್ರ ಸರ್ಕಾರದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಎಂಜಿನಿಯರ್ ಗಳಿಗೆ ಉತ್ತಮ ಅವಕಾಶ ದೊರೆಯುತ್ತಿದೆ. ಕೇಂದ್ರ ಸರ್ಕಾರದ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ನಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳಿಂದ ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ BE ಅಥವಾ B.Tech ಪೂರ್ಣಗೊಳಿಸಿರಬೇಕು.
HPCL ಸಂಸ್ಥೆಯು 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಮುಂದಿನ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು: https://jobs.hpcl.co.in/Recruit_New/recruitlogin.jsp
📌ಹುದ್ದೆಯ ವಿವರಗಳು
ಸಂಸ್ಥೆ: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL)
ಹುದ್ದೆಯ ಹೆಸರು: ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ
ಒಟ್ಟು ಹುದ್ದೆಗಳು: 358
ಉದ್ಯೋಗದ ಸ್ಥಳ: ಅಖಿಲ ಭಾರತ
📌ಪ್ರಮುಖ ಲಿಂಕ್ ಗಳು
ಅರ್ಜಿ ಸಲ್ಲಿಸುವ ಲಿಂಕ್: https://jobs.hpcl.co.in/Recruit_New/recruitlogin.jsp
ವೆಬ್ಸೈಟ್ ಲಿಂಕ್ (ಅಧಿಸೂಚನೆ): https://www.hindustanpetroleum.com/job-openings
📌ಪ್ರಮುಖ ದಿನಾಂಕಗಳು:
ಅರ್ಜಿ ಆರಂಭ ದಿನಾಂಕ: 15 ಜುಲೈ 2026
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜುಲೈ 2026
📌ಶೈಕ್ಷಣಿಕ ಅರ್ಹತೆ
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳಿಂದ ಸಿವಿಲ್/ ಎಲೆಕ್ಟ್ರಿಕಲ್/ ಮೆಕ್ಯಾನಿಕಲ್/ ಇನ್ಸ್ಟ್ರುಮೆಂಟೇಶನ್ ಎಂಜಿನಿಯರಿಂಗ್ನಲ್ಲಿ BE ಅಥವಾ B.Tech ಪೂರ್ಣಗೊಳಿಸಿರಬೇಕು. ಕನಿಷ್ಠ ಶೇ 60 ರಷ್ಟು ಒಟ್ಟು ಅಂಕಗಳು (ಅಥವಾ ಸಮಾನವಾದ CGPA) ಅಗತ್ಯವಿದೆ. ಎಸ್ಸಿ/ಎಸ್ಟಿ/ ಪಿಡಬ್ಲ್ಯೂಬಿಡಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ, ಕನಿಷ್ಠ ಶೇ 50 ರಷ್ಟು ಒಟ್ಟು ಅಂಕಗಳು ಗಳಿಸಿದ್ದರೆ ಅರ್ಜಿ ಸಲ್ಲಿಸಬಹುದು.
📌ವಯೋಮಿತಿ
ಅಭ್ಯರ್ಥಿಯು 31 ಜುಲೈ 2026 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ವರ್ಷಗಳನ್ನು ಹೊಂದಿರಬೇಕು. ಅರ್ಜಿ ಶುಲ್ಕ ಇರುವುದಿಲ್ಲ.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ: 05 ವರ್ಷಗಳು
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 10 ವರ್ಷಗಳು
📌ಆಯ್ಕೆ ಪ್ರಕ್ರಿಯೆ
* ಕಂಪ್ಯೂಟರ್ ಆಧಾರಿತ ಪರೀಕ್ಷೆ
* ಸಂದರ್ಶನ
📌ಅರ್ಜಿ ಸಲ್ಲಿಸುವುದು ಹೇಗೆ?
* ಮೊದಲು HPCL ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
* ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ, ನಿಮ್ಮ ಅರ್ಹತೆಯನ್ನು ಖಚಿತಪಡಿಸಿಕೊಳ್ಳಿ.
* ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ಮತ್ತು ಅಗತ್ಯ ದಾಖಲೆಗಳನ್ನು (ರೆಸ್ಯೂಮ್, ಐಡಿ ಪ್ರೂಫ್, ಶೈಕ್ಷಣಿಕ ಪ್ರಮಾಣಪತ್ರಗಳು) ಸಿದ್ಧವಿಟ್ಟುಕೊಳ್ಳಿ.
* ಲಿಂಕ್ ಅನ್ನು ಕ್ಲಿಕ್ ಮಾಡಿ, ಆನ್ಲೈನ್ ಅರ್ಜಿಯನ್ನು ಭರ್ತಿ ಮಾಡಿ.
* ಅಗತ್ಯವಿರುವ ಸ್ಕ್ಯಾನ್ ಮಾಡಿದ ದಾಖಲೆಗಳನ್ನು ಅಪ್ಲೋಡ್ ಮಾಡಿ, ಅಂತಿಮವಾಗಿ ‘Submit’ ಬಟನ್ ಒತ್ತಿ.
* ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ಸಂಖ್ಯೆಯನ್ನು ಸೇವ್ ಮಾಡಿಟ್ಟುಕೊಳ್ಳಿ.






