ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ

Photo Credit : kal-mys.gramaone.karnataka.gov.in
ನಾಗರಿಕ ಸೇವೆಗಳನ್ನು ನೀಡಲು ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯಲು ಗ್ರಾಮ ಮಟ್ಟದಲ್ಲಿ ಸೂಕ್ತ ಸೇವೆಯನ್ನು ಒದಗಿಸಲು ವಿವಿಧ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಶಾಖೆಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ
ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ಆನ್ಲೈನ್ ಸೇವೆಗಳನ್ನು ತ್ವರಿತವಾಗಿ ಒದಗಿಸಲು ಗ್ರಾಮ ಒನ್ ಕೇಂದ್ರವನ್ನು ತೆರೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಾಗರಿಕ ಸೇವೆಗಳನ್ನು ನೀಡಲು ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನವನ್ನು ಪಡೆಯಲು ಗ್ರಾಮ ಮಟ್ಟದಲ್ಲಿ ಸೂಕ್ತ ಸೇವೆಯನ್ನು ಒದಗಿಸಲು ರಾಜ್ಯ ಸರ್ಕಾರದಿಂದ ಇಡಿಸಿಎಸ್ ನಿರ್ದೇಶನಾಲಯದಿಂದ (ಇ-ಆಡಳಿತ) ವಿವಿಧ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಶಾಖೆಗಳನ್ನು ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.
ಯಾರು ಅರ್ಜಿ ಸಲ್ಲಿಸಬಹುದು?:
► ಅರ್ಜಿದಾರ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
► ಅಭ್ಯರ್ಥಿಯು ಕನಿಷ್ಠ ದ್ವಿತೀಯ ಪಿಯುಸಿ ಶಿಕ್ಷಣವನ್ನು/ಸಮನಾದ ಶಿಕ್ಷಣ ಅರ್ಹತೆ ಹೊಂದಿರಬೇಕು.
► ಅರ್ಜಿದಾರ ಅಭ್ಯರ್ಥಿಯು ಗ್ರಾಮ ಒನ್ ಕೇಂದ್ರವನ್ನು ಪ್ರಾರಂಭಿಸಲು ಅವಶ್ಯವಿರುವ ಬಂಡವಾಳ ಹೂಡಿಕೆಗೆ ಸಿದ್ದವಿರಬೇಕು.
► ಗ್ರಾಮ ಒನ್ ಕೇಂದ್ರ ಪ್ರಾರಂಭಿಸಲು ಇಚ್ಚಿಸಿರುವ ಜಾಗವು ಸಾರ್ವಜನಿಕರಿಗೆ ಸುಲಭವಾಗಿ ಸಂಪರ್ಕಿಸುವಂತಿರಬೇಕು.
ಗ್ರಾಮ ಒನ್ ಕೇಂದ್ರ ಪ್ರಾರಂಭಿಸಲು ಅವಶ್ಯವಿರುವ ಉಪಕರಣಗಳು:
ಅರ್ಜಿದಾರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಗ್ರಾಮ ಒನ್ ಕೇಂದ್ರ ತೆರೆಯಲು ಅನುಮೋದನೆ ಪಡೆದ ಬಳಿಕ ಕೇಂದ್ರವನ್ನು ಆರಂಭಿಸಲು ಈ ಕೆಳಗಿನ ವಸ್ತುಗಳನ್ನು ಖರೀದಿಸಬೇಕಾಗುತ್ತದೆ.
► ಲ್ಯಾಪ್ ಟಾಪ್/ಡೆಸ್ಕ್ ಟಾಪ್
► ಪ್ರಿಂಟರ್
► ಬಯೋಮೆಟ್ರಿಕ್ ಸ್ಕ್ಯಾನರ್
► ವೆಬ್ ಕ್ಯಾಮರಾ
► ವೈ-ಪೈ ರಿಸೀವರ್
► ಯುಪಿಎಸ್ ಬ್ಯಾಕಪ್
ಅರ್ಜಿ ಸಲ್ಲಿಸಲು ಬೇಕಾಗಿರುವ ಗುರುತಿನ ಚೀಟಿಗಳು:
ಅಭ್ಯರ್ಥಿಯ ಆಧಾರ್ ಕಾರ್ಡ್
ಪಾನ್ ಕಾರ್ಡ್
ಬ್ಯಾಂಕ್ ಪಾಸ್ ಬುಕ್
ಅಂಗಡಿಯ ಪೋಟೋ
ವಿದ್ಯಾರ್ಹತೆ ಪ್ರಮಾಣ ಪತ್ರ
ಯಾವ ಕೇಂದ್ರಗಳಿಗೆ ಅರ್ಜಿ ಆಹ್ವಾನಿಸಲಾಗಿದೆ?:
ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಹಾಸನ, ಕಲಬುರಗಿ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡಗಿನಲ್ಲಿ ಮಡಿಕೇರಿ, ಪೊನ್ನಂಪೇಟೆ, ವಿರಾಜಪೇಟೆ ಮತ್ತು ಸೋಮವಾರ ಪೇಟೆ ತಾಲೂಕುಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಈ ಕೆಳಗಿನ ಲಿಂಕ್ಗೆ ಹೋಗಿ ವಿವರಗಳನ್ನು ತುಂಬಿ, ತಮ್ಮ ಗ್ರಾಮವನ್ನು ಆರಿಸಿಕೊಳ್ಳುವ ಮೂಲಕ ಸೂಕ್ತ ಪ್ರಮಾಣಪತ್ರಗಳನ್ನು ಸಲ್ಲಿಸಿ ಅರ್ಜಿ ಸಲ್ಲಿಸಬಹುದು.
https://kal-mys.gramaone.karnataka.gov.in/index.php/applicant-registration-initial-step







