ಇಸ್ರೇಲ್ ದಾಳಿಯಲ್ಲಿ ಹಮಾಸ್ ಮುಖ್ಯಸ್ಥರ 10 ಸಂಬಂಧಿಕರ ಮೃತ್ಯು: ವರದಿ
ಸಾಂದರ್ಭಿಕ ಚಿತ್ರ | PC : NDTV
ಗಾಝಾ : ಗಾಝಾದ ಮೇಲೆ ಮಂಗಳವಾರ ಇಸ್ರೇಲ್ ಪಡೆ ನಡೆಸಿದ ಬಾಂಬ್ ದಾಳಿಯಲ್ಲಿ ಹಮಾಸ್ನ ರಾಜಕೀಯ ವಿಭಾಗದ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಸಹೋದರಿ ಸೇರಿದಂತೆ 10 ಸಂಬಂಧಿಕರು ಮೃತಪಟ್ಟಿರುವುದಾಗಿ ಗಾಝಾದ ಅಧಿಕಾರಿಗಳು ಹೇಳಿದ್ದಾರೆ.
ಉತ್ತರ ಗಾಝಾದ ಅಲ್-ಶತಿ ನಿರಾಶ್ರಿತರ ಶಿಬಿರದ ಮೇಲೆ ಮಂಗಳವಾರ ಬೆಳಿಗ್ಗೆ ನಡೆದ ದಾಳಿಯಲ್ಲಿ ಹನಿಯೆಹ್ ಅವರ ಸಹೋದರಿ ಸಹಿತ 10 ಸಂಬಂಧಿಕರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಗಾಝಾದ ನಾಗರಿಕ ಭದ್ರತಾ ಏಜೆನ್ಸಿಯ ವಕ್ತಾರ ಮಹ್ಮೂದ್ ಬಸಾಲ್ರನ್ನು ಉಲ್ಲೇಖಿಸಿ ಎಎಫ್ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.
Next Story