ಅಮೆರಿಕದಲ್ಲಿ ಶೂಟೌಟ್: 3 ಮಂದಿ ಸಾವು; 10 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ಅಮೆರಿಕದ ಅರ್ಕಾನ್ಸಾಸ್ ರಾಜ್ಯದಲ್ಲಿ ಕಿರಾಣಿ ಅಂಗಡಿಯೊಂದರ ಬಳಿ ನಡೆದ ಗುಂಡಿನ ದಾಳಿಯಲ್ಲಿ 3 ಮಂದಿ ಮೃತಪಟ್ಟಿದ್ದು ಇತರ 10 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಗಾಯಗೊಂಡವರಲ್ಲಿ ಇಬ್ಬರು ಕಾನೂನು ಜಾರಿ ಅಧಿಕಾರಿಗಳೂ ಸೇರಿದ್ದಾರೆ. ಫೋರ್ಡಿಸಿ ನಗರದಲ್ಲಿನ ಕಿರಾಣಿ ಅಂಗಡಿಯೊಂದರ ಬಳಿ ಬಂದ ವ್ಯಕ್ತಿಯೊಬ್ಬ ಏಕಾಏಕಿ ಪಿಸ್ತೂಲ್ನಿಂದ ಮನಬಂದಂತೆ ಗುಂಡು ಹಾರಿಸಿದಾಗ ಅಂಗಡಿ ಬಳಿ ನಿಂತಿದ್ದ ಮೂರು ಮಂದಿ ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ ಆರೋಪಿ ಪೊಲೀಸರತ್ತ ಗುಂಡು ಹಾರಿಸಿದ್ದಾನೆ. ಆಗ ಇಬ್ಬರು ಅಧಿಕಾರಿಗಳ ಸಹಿತ 10 ಮಂದಿ ಗಾಯಗೊಂಡಿದ್ದಾರೆ. ಬಳಿಕ ಆರೋಪಿ ಟ್ರಾವಿಸ್ ಯೂಜಿನ್ ಪೋಸೆಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
Next Story