ಜರ್ಮನಿ | ಚೂರಿ ಇರಿತದಲ್ಲಿ 6 ಮಂದಿಗೆ ಗಾಯ
ಸಾಂದರ್ಭಿಕ ಚಿತ್ರ
ಬರ್ಲಿನ್: ಪಶ್ಚಿಮ ಜರ್ಮನಿಯಲ್ಲಿ ನಡೆಯುತ್ತಿದ್ದ ಉತ್ಸವಕ್ಕೆ ತೆರಳುತ್ತಿದ್ದ ಬಸ್ಸೊಂದರಲ್ಲಿ ನಡೆದ ಚೂರಿ ಇರಿತದ ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದು ಇದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ಕೊಲೋನ್ ನಗರದ ಪೂರ್ವದಲ್ಲಿರುವ ಸಿಯೆಗನ್ ಎಂಬಲ್ಲಿ ಶುಕ್ರವಾರ ಸಂಜೆ ಘಟನೆ ನಡೆದಿದೆ. ಸುಮಾರು 45 ಮಂದಿ ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ 32 ವರ್ಷದ ಮಹಿಳೆಯೊಬ್ಬಳು ಏಕಾಏಕಿ ಚೂರಿಯಿಂದ ದಾಳಿ ನಡೆಸಿದ್ದು 16ರಿಂದ 30 ವರ್ಷದೊಳಗಿನ 6 ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಶಂಕಿತ ಮಹಿಳೆಯನ್ನು ಬಂಧಿಸಲಾಗಿದ್ದು ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story