ಬಲೂಚಿಸ್ತಾನದಲ್ಲಿ ಉಗ್ರರ ದಾಳಿಗೆ 7 ಕಾರ್ಮಿಕರ ಮೃತ್ಯು
Photo : NDTV (ಸಾಂದರ್ಭಿಕ ಚಿತ್ರ)
ಇಸ್ಲಾಮಾಬಾದ್ : ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತದಲ್ಲಿ ಗುರುವಾರ ಬೆಳಗ್ಗೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು ಓರ್ವ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬಲೂಚಿಸ್ತಾನದ ಗ್ವದರ್ನಲ್ಲಿ ತಮ್ಮ ಬಾಡಿಗೆ ಕೋಣೆಯಲ್ಲಿ ಮಲಗಿದ್ದ ಕಾರ್ಮಿಕರ ಮೇಲೆ ಗುರುವಾರ ಬೆಳಿಗ್ಗೆ 3 ಗಂಟೆ ವೇಳೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಮೃತಪಟ್ಟ ಕಾರ್ಮಿಕರು ಪಂಜಾಬ್ ಪ್ರಾಂತದ ನಿವಾಸಿಗಳು ಎಂದು ಗ್ವದರ್ನ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ `ಡಾನ್' ಪತ್ರಿಕೆ ವರದಿ ಮಾಡಿದೆ.
ಇದುವರೆಗೆ ಯಾವುದೇ ಸಂಘಟನೆ ದಾಳಿಯ ಹೊಣೆಯನ್ನು ವಹಿಸಿಕೊಂಡಿಲ್ಲ. ಬಲೂಚಿಸ್ತಾನದಲ್ಲಿ ಪಂಜಾಬ್ ಪ್ರಾಂತದವರನ್ನು ಗುರಿಯಾಗಿಸಿ ನಡೆಯುತ್ತಿರುವ ದಾಳಿಯ ಮುಂದುವರಿದ ಭಾಗ ಇದಾಗಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story