ವಿಯೆಟ್ನಾಂನಲ್ಲಿ ಬೋಟ್ ದುರಂತ: 15 ಭಾರತೀಯ ಪ್ರವಾಸಿಗರು ಮೃತ್ಯು

Photo credit: X
ಹನೋಯ್: ದಕ್ಷಿಣ ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಸಮೀಪ ಶನಿವಾರ 32 ಭಾರತೀಯ ಪ್ರವಾಸಿಗರು ಹಾಗೂ ನಾಲ್ವರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮಗುಚಿ ಬಿದ್ದ ಪರಿಣಾಮ ಕನಿಷ್ಠ 15 ಭಾರತೀಯ ಪ್ರವಾಸಿಗರು ಮೃತಪಟ್ಟಿದ್ದಾರೆ ಎಂದು ವಿಯೆಟ್ನಾಂನ VnExpress International ಸುದ್ದಿ ಜಾಲತಾಣ ವರದಿ ಮಾಡಿದೆ.
ಸ್ಥಳೀಯ ಅಧಿಕಾರಿಗಳು ತಕ್ಷಣವೇ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಉಳಿದ ಪ್ರಯಾಣಿಕರಿಗಾಗಿ ಸಮುದ್ರದಲ್ಲಿ ಶೋಧ ಮುಂದುವರಿದಿದೆ. ಅಪಘಾತಕ್ಕೆ ಕಾರಣವಾದ ಸಂದರ್ಭಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಘಟನೆಯ ಸಂಪೂರ್ಣ ವಿವರಗಳನ್ನು ಇನ್ನಷ್ಟೇ ಖಚಿತಪಡಿಸಿಕೊಳ್ಳಲಾಗುತ್ತಿದೆ.
Next Story




