ಇರಾಕ್ | ಶಾಪಿಂಗ್ ಮಾಲ್ ನಲ್ಲಿ ಬೆಂಕಿ ಅವಘಡ: 50 ಮಂದಿ ಮೃತ್ಯು

Screengrab: X/@AZ_Intel_
ಬಾಗ್ದಾದ್: ಶಾಪಿಂಗ್ ಮಾಲ್ ವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 50 ಮಂದಿ ಮೃತಪಟ್ಟಿರುವ ಘಟನೆ ಪೂರ್ವ ಇರಾಕ್ ನ ಕುಟ್ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಈ ಕುರಿತು ಅಧಿಕೃತ ಸುದ್ದಿ ಸಂಸ್ಥೆ ಐಎನ್ಎಗೆ ಪ್ರತಿಕ್ರಿಯಿಸಿದ ವಾಸಿಟ್ ಪ್ರಾಂತ್ಯದ ಗವರ್ನರ್, “ಮೃತರ ಸಂಖ್ಯೆ 50ಕ್ಕೆ ತಲುಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಲ್ ನಲ್ಲಿ ಬೆಂಕಿ ಅವಘಡ ಸಂಭವಿಸಲು ಕಾರಣವೇನು ಎಂಬ ಕುರಿತು ಅಧಿಕಾರಿಗಳು ತನಿಖೆ ಪ್ರಾರಂಭಿಸಿದ್ದಾರೆ” ಎಂದು ತಿಳಿಸಿದ್ದಾರೆ.
ಈ ದುರಂತದ ಬೆನ್ನಿಗೇ, ಈ ಪ್ರಾಂತ್ಯದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದ್ದು, ಸ್ಥಳೀಯ ಅಧಿಕಾರಿಗಳು, ಕಟ್ಟಡ ಮತ್ತು ಮಾಲ್ ಮಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳುವಂತೆ ಗವರ್ನರ್ ಸಂಬಂಧಿಸಿದ ಪ್ರಾಧಿಕಾರಗಳಿಗೆ ಸೂಚಿಸಿದ್ದಾರೆ ಎಂದೂ ವರದಿಯಾಗಿದೆ.
BREAKING: At least 50 people killed in fire at shopping mall in Kut, Iraq. pic.twitter.com/mUxndFmka6
— AZ Intel (@AZ_Intel_) July 17, 2025
Next Story







