ಮಧ್ಯಪ್ರಾಚ್ಯದಿಂದ 9 ಸಾವಿರ ಅಮೆರಿಕನ್ನರ ಸ್ಥಳಾಂತರ: ವರದಿ

ಸಾಂದರ್ಭಿಕ ಚಿತ್ರ
ವಾಷಿಂಗ್ಟನ್: ಇರಾನ್ ಮೇಲೆ ಅಮೆರಿಕ–ಇಸ್ರೇಲ್ ಜಂಟಿ ದಾಳಿಗಳು ಆರಂಭವಾದ ನಂತರ ಮಧ್ಯಪ್ರಾಚ್ಯದಿಂದ ಸುಮಾರು 9 ಸಾವಿರ ಅಮೆರಿಕನ್ನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ.
ದುಬೈನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಪಕ್ಕದ ಪಾರ್ಕಿಂಗ್ ಪ್ರದೇಶದಲ್ಲಿ ಡ್ರೋನ್ ದಾಳಿ ನಡೆದ ಬಳಿಕ ಅಲ್ಲಿನ ಎಲ್ಲಾ ಅಮೆರಿಕ ಸಿಬ್ಬಂದಿಯನ್ನು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲಾಗಿದೆ. ಘಟನೆಯ ನಂತರ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗಿದೆ ಎಂದು ರುಬಿಯೊ ತಿಳಿಸಿದ್ದಾರೆ.
ಇನ್ನೂ ಸುಮಾರು 1,600 ಅಮೆರಿಕ ನಾಗರಿಕರು ಮಧ್ಯಪ್ರಾಚ್ಯದಲ್ಲೇ ಸಹಾಯ ಕೋರಿ ಸಂಪರ್ಕದಲ್ಲಿದ್ದಾರೆ. ಅವರನ್ನು ಸುರಕ್ಷಿತವಾಗಿ ಹೊರತೆಗೆದುಕೊಳ್ಳಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆ ಸ್ಪಷ್ಟಪಡಿಸಿದೆ.
Next Story




