ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಬಂಧನಕ್ಕೆ ಆಮ್ನೆಸ್ಟಿ ಇಂಟರ್ನ್ಯಾಷನಲ್ ಆಗ್ರಹ

ಬೆಂಜಮಿನ್ ನೆತನ್ಯಾಹು | Photo Credit : PTI
ಹೇಗ್, ಜು.24: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಬಂಧಿಸಬೇಕು ಮತ್ತು ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯದ (ಐಸಿಸಿ) ಮುಂದೆ ವಿಚಾರಣೆಗೆ ಒಳಪಡಿಸಬೇಕು ಎಂದು ಆಮ್ನೆಸ್ಟಿ ಇಂಟರ್ನ್ಯಾಷನಲ್ ನ ಪ್ರತಿನಿಧಿ ಎರಿಕಾ ಗುವೇರಾ ರೊಸಾಸ್ ಅವರು ಆಗ್ರಹಿಸಿದ್ದಾರೆ.
ಅಮೆರಿಕ ಅಧಿಕಾರಿಗಳು ಮಾನವ ಹಕ್ಕುಗಳನ್ನು ಎತ್ತಿಹಿಡಿಯಬೇಕು ಮತ್ತು ಕಾನೂನಿನ ಆಡಳಿತವನ್ನು ಗೌರವಿಸಬೇಕು ಎಂದು ರೊಸಾಸ್ ಅವರು `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. ಗಾಝಾದಲ್ಲಿ ಯುದ್ಧ ಅಪರಾಧಗಳನ್ನು ಎಸಗಿದ್ದಾರೆ ಎಂದು ಆರೋಪಿಸಿ ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಲಯವು 2024 ರಲ್ಲಿ ನೆತನ್ಯಾಹು ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.
Next Story




