ಪಿಒಕೆಯಲ್ಲಿ ಪಾಕ್ ವಿರೋಧಿ ಪ್ರತಿಭಟನೆ: ಸೇನೆಯಿಂದ ಲಾಠಿಚಾರ್ಜ್, ಅಶ್ರುವಾಯು

PC | AFP
ಇಸ್ಲಾಮಾಬಾದ್, ಆ.14: ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ಯ ಪ್ರಮುಖ ನಗರ ರಾವಲಕೋಟ್ನಲ್ಲಿ ಸ್ವಾತಂತ್ರ್ಯಕ್ಕಾಗಿ ಆಗ್ರಹಿಸಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಸಾವಿರಾರು ಜನರನ್ನು ಚದುರಿಸಲು ಸೇನೆ ಲಾಠಿಚಾರ್ಜ್ ನಡೆಸಿ ಅಶ್ರುವಾಯು ಪ್ರಯೋಗಿಸಿದ್ದು ಹಲವರನ್ನು ಬಂಧಿಸಿರುವುದಾಗಿ ವರದಿಯಾಗಿದೆ.
ಪಾಕಿಸ್ತಾನದ ಆಡಳಿತದಿಂದ ಸ್ವಾತಂತ್ರ್ಯಕ್ಕಾಗಿ ಆಗ್ರಹಿಸಿ ಮಕ್ಕಳು, ಮಹಿಳೆಯರು, ಹಿರಿಯರು ಸೇರಿದಂತೆ ಸಾವಿರಾರು ಜನರು ಧ್ವಜಗಳನ್ನು ಬೀಸುತ್ತಾ ಪ್ರತಿಭಟನೆ ನಡೆಸಿದರು. ಶಾಂತಿಯುತ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಚದುರಿಸಲು ಪಾಕಿಸ್ತಾನದ ಸೇನಾ ಸಿಬ್ಬಂದಿ ಅಶ್ರುವಾಯು ಪ್ರಯೋಗಿಸಿ ಲಾಠಿಚಾರ್ಜ್ ನಡೆಸಿದಾಗ ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
Next Story





