Australia | ಅಪಘಾತದಲ್ಲಿ ಭಾರತೀಯ ಮೂಲದ ಮಹಿಳೆ ಮೃತ್ಯು

Photo | NDTV
ಸಿಡ್ನಿ : ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಗರ್ಭಿಣಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ.
ಎಂಟು ತಿಂಗಳ ಗರ್ಭಿಣಿಯಾಗಿದ್ದ ಸಮನ್ವಿತಾ ಧಾರೇಶ್ವರ್ ತನ್ನ ಪತಿ ಮತ್ತು ಮೂರು ವರ್ಷದ ಪುತ್ರನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಹಾರ್ನ್ಸ್ ಬೈಯ ಜಾರ್ಜ್ ಸ್ಟ್ರೀಟ್ನಲ್ಲಿ ಸಮನ್ವಿತಾ ಧಾರೇಶ್ವರ್ ಅವರು ಪತಿ ಮತ್ತು ಮಗುವಿನ ಜೊತೆ ರಸ್ತೆ ದಾಟಲು ಪ್ರಯತ್ನಿಸುವಾಗ ಅವರಿಗೆ ದಾರಿ ಕೊಡಲು ಕಿಯಾ ಕಾರು ನಿಂತಿದೆ. ಈ ವೇಳೆ ಬಿಎಂಡಬ್ಲ್ಯು ಕಾರು ಹಿಂಬದಿಯಿಂದ ಬಂದು ಢಿಕ್ಕಿ ಹೊಡೆದ ಪರಿಣಾಮ ಕಿಯಾ ಕಾರು ಸಮನ್ವಿತಾ ಅವರಿಗೆ ಢಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಮನ್ವಿತಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ವೇಳೆ ಸಮನ್ವಿತಾ ಮತ್ತು ಗರ್ಭದಲ್ಲಿದ್ದ ಮಗು ಮೃತಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಅಪಘಾತದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ.





