Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೊಸ ಕರೆನ್ಸಿ ನೋಟುಗಳನ್ನು ಹೊತ್ತ...

ಹೊಸ ಕರೆನ್ಸಿ ನೋಟುಗಳನ್ನು ಹೊತ್ತ ಬೊಲಿವಿಯನ್ ವಾಯುಪಡೆಯ ವಿಮಾನ ಪತನ: ಕನಿಷ್ಠ 15 ಮೃತ್ಯು, 30 ಮಂದಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ28 Feb 2026 9:33 AM IST
share
ಹೊಸ ಕರೆನ್ಸಿ ನೋಟುಗಳನ್ನು ಹೊತ್ತ ಬೊಲಿವಿಯನ್ ವಾಯುಪಡೆಯ ವಿಮಾನ ಪತನ: ಕನಿಷ್ಠ 15 ಮೃತ್ಯು, 30 ಮಂದಿಗೆ ಗಾಯ

ಎಲ್ ಆಲ್ಟೊ (ಬೊಲಿವಿಯಾ), ಫೆ. 28: ದೇಶದ ಕೇಂದ್ರ ಬ್ಯಾಂಕ್‌ನಿಂದ ಹೊಸದಾಗಿ ಮುದ್ರಿತ ನೋಟುಗಳನ್ನು ಸಾಗಿಸುತ್ತಿದ್ದ ಬೊಲಿವಿಯನ್ ವಾಯುಪಡೆಯ ‘ಹರ್ಕ್ಯುಲಸ್’ ವಿಮಾನವು ಶುಕ್ರವಾರ ಸಂಜೆ ಎಲ್ ಆಲ್ಟೊ ನಗರದ ಜನನಿಬಿಡ ರಸ್ತೆಯಲ್ಲಿ ಪತನಗೊಂಡ ಪರಿಣಾಮ ಕನಿಷ್ಠ 15 ಮಂದಿ ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ.

ಎಲ್ ಆಲ್ಟೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಕ್ಕದಲ್ಲಿರುವ ಜನನಿಬಿಡ ವಸತಿ ಪ್ರದೇಶದಲ್ಲಿ ಟೇಕ್‌ಆಫ್ ಆದ ಕೆಲವೇ ಕ್ಷಣಗಳಲ್ಲಿ ವಾಯುಪಡೆಯ ವಿಮಾನ ನಿಯಂತ್ರಣ ತಪ್ಪಿ ನೆಲಕ್ಕುರುಳಿತು. ವಿಮಾನ ಪತನವಾದ ತೀವ್ರತೆಗೆ ಅವಶೇಷಗಳು ರಸ್ತೆಯಾದ್ಯಂತ ಚದರಿಕೊಂಡಿದ್ದು, ಹಲವಾರು ವಾಹನಗಳು ಹಾನಿಗೊಳಗಾಗಿವೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸ್ಥಳೀಯ ಆಡಳಿತದ ಪ್ರಕಾರ, ಘಟನೆ ನಡೆದ ಪ್ರದೇಶದಲ್ಲಿದ್ದ ನಾಗರಿಕರು ಹಾಗೂ ವಿಮಾನದಲ್ಲಿದ್ದ ಸಿಬ್ಬಂದಿ ಇಬ್ಬರೂ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಅಪಘಾತದ ನಿಖರ ಕಾರಣ ತಿಳಿದು ಬಂದಿಲ್ಲ. ಹವಾಮಾನ ಪರಿಸ್ಥಿತಿ ಹಾಗೂ ತಾಂತ್ರಿಕ ಅಂಶಗಳ ಪರಿಶೀಲನೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಸಮಗ್ರ ತನಿಖೆ ಆರಂಭಿಸಲಾಗಿದ್ದು, ವಿಮಾನದ ಬ್ಲ್ಯಾಕ್ ಬಾಕ್ಸ್ ಮತ್ತು ಸಂಬಂಧಿತ ತಾಂತ್ರಿಕ ಮಾಹಿತಿಯನ್ನು ವಿಶ್ಲೇಷಿಸುವ ಪ್ರಕ್ರಿಯೆ ಮುಂದುವರಿದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೃಶ್ಯಗಳು ಅಪಘಾತದ ಭೀಕರತೆಯನ್ನು ಪ್ರತಿಬಿಂಬಿಸಿವೆ. ಅವಶೇಷಗಳ ಸುತ್ತ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿರುವುದು ಕಂಡುಬಂದಿದ್ದು, ನೆಲದ ಮೇಲೆ ಚದರಿದ ಕರೆನ್ಸಿ ನೋಟುಗಳನ್ನು ಕೆಲವರು ಎತ್ತಿಕೊಳ್ಳುತ್ತಿರುವ ದೃಶ್ಯಗಳೂ ವೈರಲ್ ಆಗಿವೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಜನರನ್ನು ಸ್ಥಳದಿಂದ ದೂರ ಸರಿಸಲು ಅಧಿಕಾರಿಗಳು ಜಲ ಫಿರಂಗಿಗಳನ್ನು ಬಳಸಿದ್ದಾರೆ.

ಘಟನೆಯ ನಂತರ ಎಲ್ ಆಲ್ಟೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮುನ್ನೆಚ್ಚರಿಕಾ ಕ್ರಮವಾಗಿ ತಾತ್ಕಾಲಿಕವಾಗಿ ಮುಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾಷ್ಟ್ರೀಯ ವಿಮಾನಯಾನ ಸಂಸ್ಥೆ ಬೊಲಿವಿಯಾನಾ ಡಿ ಅವಿಯಾಸಿಯನ್ ಪ್ರಕಟಣೆಯಲ್ಲಿ, ಪತನಗೊಂಡ ವಿಮಾನವು ತನ್ನ ದಳಕ್ಕೆ ಸೇರಿಲ್ಲ ಎಂದು ಸ್ಪಷ್ಟಪಡಿಸಿದೆ.

ದೇಶದ ರಾಜಧಾನಿ ಲಾ ಪಾಜ್ ಸಮೀಪದಲ್ಲಿರುವ ಎಲ್ ಆಲ್ಟೊ ನಗರವು ಸಮುದ್ರಮಟ್ಟದಿಂದ ಸುಮಾರು 4,000 ಮೀಟರ್‌ಗಳಿಗಿಂತ ಹೆಚ್ಚಿನ ಎತ್ತರದಲ್ಲಿದೆ. ಬೊಲಿವಿಯಾದ ಪ್ರಮುಖ ನಗರ ಕೇಂದ್ರಗಳಲ್ಲಿ ಒಂದಾದ ಇದು, ಎಲ್ ಆಲ್ಟೊ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದೇಶೀಯ ಹಾಗೂ ಅಂತರರಾಷ್ಟ್ರೀಯ ಹಾರಾಟಗಳಿಗೆ ಪ್ರಮುಖ ಕೇಂದ್ರವಾಗಿಯೂ ಕಾರ್ಯನಿರ್ವಹಿಸುತ್ತದೆ.

Tags

BoliviaAir Forceplane crash
share
ವಾರ್ತಾಭಾರತಿ
ವಾರ್ತಾಭಾರತಿ
Next Story
X