Brazil | ಹೆಲಿಕಾಪ್ಟರ್ ಗಳ ನಡುವೆ ಡಿಕ್ಕಿ; ಕನಿಷ್ಠ 6 ಮೃತ್ಯು

Photo Credit ; timesofindia.indiatimes.com
ಬ್ರಸೀಲಿಯಾ, ಜೂ.14: ಬ್ರೆಝಿಲ್ ನ ರಿಯೋ ಡಿ ಜನೈರೊದಲ್ಲಿ ಎರಡು ಹೆಲಿಕಾಪ್ಟರ್ಗಳು ಗಗನದಲ್ಲೇ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಬ್ರೆಝಿಲ್ ನ ಅಗ್ನಿಶಾಮಕ ಸಿಬ್ಬಂದಿ ತಿಳಿಸಿದ್ದಾರೆ.
ಎರಡು ಹೆಲಿಕಾಪ್ಟರ್ ಗಳು ಬೆಳಿಗ್ಗೆ ರೆಕ್ರೆಯೊ ಡೊಸ್ ಬಂದೇರಾಂಟೆಸ್ ಪ್ರದೇಶದಲ್ಲಿ ಗಗನದಲ್ಲೇ ಪರಸ್ಪರ ಡಿಕ್ಕಿ ಹೊಡೆದು, ಎಲೆಕ್ಟ್ರಿಕ್ ಕಾರು ಡೀಲರ್ಶಿಪ್ ನ ಪಾರ್ಕಿಂಗ್ ಸ್ಥಳಕ್ಕೆ ಅಪ್ಪಳಿಸಿವೆ. ಇದರಿಂದ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 20 ವಾಹನಗಳು ಬೆಂಕಿಗೆ ಆಹುತಿಯಾಗಿವೆ.
ಕನಿಷ್ಠ ಆರು ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದೆ. ಮೃತರೆಲ್ಲರೂ ಅಪಘಾತಕ್ಕೊಳಗಾದ ಹೆಲಿಕಾಪ್ಟರ್ ಗಳ ಸಿಬ್ಬಂದಿಯಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
Next Story






