ಕೆನಡಾ |ಶೂಟೌಟ್ನಲ್ಲಿ ಒಬ್ಬ ಮೃತ್ಯು; 5 ಮಂದಿಗೆ ಗಾಯ

PC : NDTV
ಟೊರಂಟೊ: ಕೆನಡಾದ ಟೊರಂಟೋ ನಗರದ ಹೊರವಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು ಇತರ 5 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಫ್ಲೆಮಿಂಗ್ಟನ್ ಮತ್ತು ಝಚರಿ ರಸ್ತೆಯ ಬಳಿ ಗುಂಡಿನ ದಾಳಿ ನಡೆದಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಓರ್ವ ಮಹಿಳೆ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಂಕಿತ ಆರೋಪಿಯ ಬಗ್ಗೆ ಮಾಹಿತಿ ಲಭಿಸಿಲ್ಲ ಹಾಗೂ ಘಟನೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
Next Story





