Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ: ವೀಸಾ ನಿಯಮ ಸರಳಗೊಳಿಸಲು ನಿರ್ಧಾರ

ಚೀನಾ: ವೀಸಾ ನಿಯಮ ಸರಳಗೊಳಿಸಲು ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ4 Aug 2023 9:29 PM IST
share
ಚೀನಾ: ವೀಸಾ ನಿಯಮ ಸರಳಗೊಳಿಸಲು ನಿರ್ಧಾರ

ಬೀಜಿಂಗ್, ಆ.4: ಕೆಲವು ವಿದೇಶೀಯರಿಗೆ ಆಗಮನದ ಬಳಿಕ ವೀಸಾಗಳನ್ನು ಪಡೆಯಲು ಮತ್ತು ಗ್ರಾಮೀಣ ನಿವಾಸಿಗಳು ಸುಲಭವಾಗಿ ನಗರದಲ್ಲಿ ನೆಲೆಸಲು ಅವಕಾಶ ಮಾಡಿಕೊಡಲು ವೀಸಾ ನಿಯಮಾವಳಿಗಳನ್ನು ಸರಳಗೊಳಿಸಲು ನಿರ್ಧರಿಸಲಾಗಿದೆ ಎಂದು ಚೀನಾ ಘೋಷಿಸಿದೆ.

ಆರ್ಥಿಕತೆಗೆ ಉತ್ತೇಜನ ನೀಡುವ ಕ್ರಮ ಇದಾಗಿದೆ. ಈ ಸಡಿಲಿಕೆಯು `ಜನತೆ, ವಾಹನಗಳು, ಮಾಹಿತಿ ಮತ್ತು ಡೇಟಾದ' ಮುಕ್ತ ಚಲನೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಚೀನಾದ ಸಾರ್ವಜನಿಕ ಭದ್ರತಾ ಇಲಾಖೆ ಹೇಳಿದೆ. ಬಳಕೆ ಪ್ರಮಾಣದ ಕುಸಿತ, ರಿಯಲ್ ಎಸ್ಟೇಟ್ ವಲಯದ ಬಿಕ್ಕಟ್ಟಿನಿಂದಾಗಿ ಚೀನಾದ ಕೊರೊನೋತ್ತರ ಚೇತರಿಕೆ ಪ್ರಕ್ರಿಯೆ ಇತ್ತೀಚಿನ ತಿಂಗಳಲ್ಲಿ ನಿಧಾನಗತಿಗೆ ತಿರುಗಿದೆ.

ಈ ಆರ್ಥಿಕ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಬೆಳವಣಿಗೆ ದರ ಕೇವಲ 0.08%ದಷ್ಟು ಹೆಚ್ಚಿದ್ದರೆ ಯುವಜನರ ನಿರುದ್ಯೋಗ ಪ್ರಮಾಣ ದಾಖಲೆಯ 20%ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ವಿದೇಶದ ಉದ್ಯಮಿಗಳಿಗೆ ಹೊಸ ವೀಸಾ ನೀತಿ ಸೇರಿದಂತೆ 26 ಹೊಸ ಉಪಕ್ರಮಗಳನ್ನು ಇಲಾಖೆ ಘೋಷಿಸಿದೆ. ವ್ಯಾಪಾರ ಮಾತುಕತೆ, ಪ್ರದರ್ಶನ, ವಿಚಾರ ಸಂಕಿರಣ ಅಥವಾ ಹೂಡಿಕೆಗಾಗಿ ಚೀನಾಕ್ಕೆ ಆಗಮಿಸುವವರು ಸೂಕ್ತ ದಾಖಲೆ ಒದಗಿಸಿದರೆ `ವೀಸಾ ಆನ್ ಅರೈವಲ್'(ಆಗಮನದ ಬಳಿಕ ವೀಸಾ ಪಡೆಯುವ ವ್ಯವಸ್ಥೆ)ಗೆ ಅರ್ಹರಾಗುತ್ತಾರೆ.

ಈ ಹಿಂದೆ ಚೀನಾಕ್ಕೆ ಭೇಟಿ ನೀಡುವವರು ತಾವು ಪ್ರಯಾಣ ಆರಂಭಿಸುವ ದೇಶದಲ್ಲಿರುವ ಚೀನಾದ ರಾಯಭಾರಿ ಕಚೇರಿಗೆ ವೀಸಾ ಕೋರಿ ಅರ್ಜಿ ಸಲ್ಲಿಸಬೇಕಿತ್ತು.

ಇದರ ಜತೆಗೆ, ಚೀನೀ ಜನರನ್ನು ದಶಕಗಳಿಂದ `ನಗರ' ಮತ್ತು `ಗ್ರಾಮೀಣ' ಎಂದು ವರ್ಗೀಕರಿಸಲಾದ ವಿವಾದಾತ್ಮಕ ಶಾಶ್ವತ ನಿವಾಸ ವ್ಯವಸ್ಥೆಯಲ್ಲಿ ಮತ್ತಷ್ಟು ಸಡಿಲಿಕೆಯನ್ನು ಪ್ರಕಟಿಸಲಾಗಿದ್ದು ಚೀನಾ ಪ್ರಜೆಗಳು ದೇಶದಾದ್ಯಂತ ಯಾವುದೇ ಪ್ರದೇಶದಲ್ಲಿ ನೆಲೆಸಲು, ವಾಸಿಸಲು ಮತ್ತು ಕೆಲಸ ಮಾಡಲು ಅವಕಾಶ ಮಾಡಿಕೊಡಲಾಗಿದೆ.

ಆದರೆ, ನಿವಾಸ ವ್ಯವಸ್ಥೆಯಡಿ ಅವರ ಹೆಸರನ್ನು ಹುಟ್ಟಿದ ಸ್ಥಳದಲ್ಲೇ ನೋಂದಾಯಿಸಿರುವುದರಿಂದ ಆ ಸ್ಥಳದಲ್ಲಿ ಮಾತ್ರ ಅವರು ಆರೋಗ್ಯ ವಿಮೆ, ಶಿಕ್ಷಣ ಮುಂತಾದ ಕೆಲವು ಸರಕಾರಿ ಸೌಲಭ್ಯಗಳನ್ನು ಪಡೆಯಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X