ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್ ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ಡೆಲ್ಸಿ ರೊಡ್ರಿಗಸ್ (Photo source:X/@kennardmatt)
ಕ್ಯಾರಕಾಸ್: ಅಮೆರಿಕದ ಸೇನಾ ಕಾರ್ಯಾಚರಣೆ, ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಸೆರೆ ಹಿಡಿದ ಹಿನ್ನೆಲೆ ವೆನೆಜುವೆಲಾದ ಸುಪ್ರೀಂ ಕೋರ್ಟ್ ರವಿವಾರ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವಂತೆ ನಿರ್ದೇಶಿಸಿದೆ.
"ಆಡಳಿತಾತ್ಮಕ ನಿರಂತರತೆ ಮತ್ತು ರಾಷ್ಟ್ರದ ಸಮಗ್ರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಪ್ರಸ್ತುತ ಉಪಾಧ್ಯಕ್ಷರಾಗಿರುವ ರೊಡ್ರಿಗಸ್, ವೆನೆಜುವೆಲಾದ ಅಧ್ಯಕ್ಷ ಹುದ್ದೆಯನ್ನು ವಹಿಸಿಕೊಳ್ಳುತ್ತಾರೆ" ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.
"ರಾಜ್ಯದ ನಿರಂತರತೆ, ಸರಕಾರದ ಆಡಳಿತ ಮತ್ತು ಅಧ್ಯಕ್ಷರ ಅನುಪಸ್ಥಿತಿಯ ಸಂದರ್ಭದಲ್ಲಿ ಸಾರ್ವಭೌಮತ್ವದ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಅನ್ವಯವಾಗುವ ಕಾನೂನು ಚೌಕಟ್ಟನ್ನು ನಿರ್ಧರಿಸಲು ಉದ್ದೇಶಿಸಿರುವುದಾಗಿ” ಸುಪ್ರೀಂ ಕೋರ್ಟ್ ತಿಳಿಸಿದೆ.
ವೆನೆಜುವೆಲಾವನ್ನು ತಾತ್ಕಾಲಿಕವಾಗಿ ಅಮೆರಿಕದ ನಿಯಂತ್ರಣಕ್ಕೆ ಒಳಪಡಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು. ಆದರೆ ವೆನೆಜುವೆಲಾದ ಸುಪ್ರೀಂ ಕೋರ್ಟ್ ರೊಡ್ರಿಗಸ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ.







