ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ; ರಾಡಾರ್ ವ್ಯವಸ್ಥೆಗೆ ಹಾನಿ

ಸಾಂದರ್ಭಿಕ ಚಿತ್ರ | Photo Credit : X
ಕುವೈತ್: ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಹಲವಾರು ಡ್ರೋನ್ಗಳು ದಾಳಿ ನಡೆಸಿದ್ದು, ವಿಮಾನ ನಿಲ್ದಾಣದ ರಾಡಾರ್ ವ್ಯವಸ್ಥೆಯ ಒಂದು ಭಾಗಕ್ಕೆ ಹಾನಿಯಾಗಿದೆ ಎಂದು ಕುವೈತ್ ನ ಅಧಿಕಾರಿಗಳು ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ.
ಘಟನೆಯಲ್ಲಿ ಯಾವುದೇ ಪ್ರಯಾಣಿಕರು ಅಥವಾ ವಿಮಾನ ನಿಲ್ದಾಣದ ಸಿಬ್ಬಂದಿಗೆ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
“ಕುವೈತ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಗುರಿಯಾಗಿಸಿಕೊಂಡು ಹಲವಾರು ಡ್ರೋನ್ ಗಳು ದಾಳಿ ನಡೆಸಿ ರಾಡಾರ್ ವ್ಯವಸ್ಥೆಗೆ ಹಾನಿ ಮಾಡಿವೆ. ಅದೃಷ್ಟವಶಾತ್ ಯಾವುದೇ ಸಾವು–ನೋವು ಸಂಭವಿಸಿಲ್ಲ,” ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರದ ವಕ್ತಾರ ಅಬ್ದುಲ್ಲಾ ಅಲ್-ರಾಜ್ಹಿ ತಿಳಿಸಿದ್ದಾರೆ.
Next Story





