Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಧನ ಟ್ಯಾಂಕ್ ಗೆ ಅಪ್ಪಳಿಸಿದ ಡ್ರೋನ್;...

ಇಂಧನ ಟ್ಯಾಂಕ್ ಗೆ ಅಪ್ಪಳಿಸಿದ ಡ್ರೋನ್; ಕುವೈತ್ ವಿಮಾನ ನಿಲ್ದಾಣದಲ್ಲಿ ಬೆಂಕಿ

ವಾರ್ತಾಭಾರತಿವಾರ್ತಾಭಾರತಿ25 March 2026 7:40 AM IST
share
ಇಂಧನ ಟ್ಯಾಂಕ್ ಗೆ ಅಪ್ಪಳಿಸಿದ ಡ್ರೋನ್; ಕುವೈತ್ ವಿಮಾನ ನಿಲ್ದಾಣದಲ್ಲಿ ಬೆಂಕಿ

ಕುವೈತ್: ಇರಾನ್-ಇಸ್ರೇಲ್-ಅಮೆರಿಕ ಸಂಘರ್ಷ ಇಡೀ ಮಧ್ಯಪ್ರಾಚ್ಯ ದೇಶಗಳಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದು, ಕುವೈತ್ ನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತೈಲ ಟ್ಯಾಂಕ್ ಗೆ ಡ್ರೋನ್ ಅಪ್ಪಳಿಸಿದ ಹಿನ್ನೆಲೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ಪ್ರಕಟಿಸಿದೆ.

ಆದರೆ ಈ ದಾಳಿಯಿಂದ "ಸೀಮಿತ ಹಾನಿ"ಯಾಗಿದೆ ಎಂದು ಪ್ರಾಥಮಿಕ ಮಾಹಿತಿಗಳನ್ನು ಉಲ್ಲೇಖಿಸಿ ನಾಗರಿಕ ವಿಮಾನಯಾನ ಮಹಾನಿರ್ದೇಶಕರು ಆನ್ಲೈನ್ ಪೋಸ್ಟ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಆಂಗೀಕೃತ ತುರ್ತು ವಿಧಿವಿಧಾನಗಳನ್ನು ಅನುಸರಿಸಿದ್ದರಿಂದ ಹೆಚ್ಚಿನ ಹಾನಿ ತಪ್ಪಿದೆ. ಅಗ್ನಿಶಾಮಕ ಸಿಬ್ಬಂದಿಯನ್ನು ಬೆಂಕಿ ಆರಿಸಲು ನಿಯೋಜಿಸಲಾಗಿದೆ ಎಂದು ಏಜೆನ್ಸಿಯ ವಕ್ತಾರ ಅಬ್ದುಲ್ ಅಲ್-ರಜ್ಹಿ ಹೇಳಿದ್ದಾರೆ. ಫೆಬ್ರವರಿ 28ರಂದು ಯುದ್ಧ ಆರಂಭವಾದ ಬಳಿಕ ಕುವೈತ್ ವಿಮಾನ ನಿಲ್ದಾಣದ ಮೇಲೆ ನಿರಂತರವಾಗಿ ದಾಳಿಗಳು ಸಂಭವಿಸುತ್ತಿವೆ.

ಮಾರ್ಚ್ 14ರಂದು ಹಲವು ಡ್ರೋನ್ ಗಳು ವಿಮಾನ ನಿಲ್ದಾಣವನ್ನು ಗುರಿ ಮಾಡಿ ದಾಳಿ ಮಾಡಿದ್ದರಿಂದ ರಾಡಾರ್ ವ್ಯವಸ್ಥೆ ಕೆಟ್ಟಿತ್ತು. ಆದರೆ ಯಾವುದೇ ಸಾವು ನೋವು ಸಂಭವಿಸಿರಲಿಲ್ಲ ಎಂದು ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ. ಮಾರ್ಚ್ 8ರಂದು ಕೂಡಾ ವಿಮಾನ ನಿಲ್ದಾಣದ ಇಂಧನ ಟ್ಯಾಂಕ್ ಮೇಲೆ ಡ್ರೋನ್ ದಾಳಿ ನಡೆದಿದ್ದು, ಅಲ್ಪ ಸ್ವಲ್ಪ ಹಾನಿಯಾಗುವ ಜತೆಗೆ ಪ್ರಯಾಣಿಕರ ಟರ್ಮಿನಲ್ ನಲ್ಲಿದ್ದ ಹಲವು ಮಂದಿಗೆ ಗಾಯಗಳಾಗಿದ್ದವು.

ಇಸ್ರೇಲ್ ಮೇಲೆ ಇರಾನ್ ದಾಳಿ ಮುಂದುವರಿಸಿರುವ ಹಿನ್ನೆಲೆಯಲ್ಲಿ ಟೆಹರಾನ್ ಮೇಲೆ ಕ್ಷಿಪಣಿ ಮಳೆಗೆರೆಯಲಾಗುತ್ತಿದೆ ಎಂದು ಇಸ್ರೇಲ್ ಸೇನೆ ಬುಧವಾರ ಮುಂಜಾನೆ ಪ್ರಕಟಿಸಿದೆ. ಟೆಹರಾನ್ ನಲ್ಲಿ ಇರಾನಿಯನ್ ಮೂಲಸೌಕರ್ಯಗಳನ್ನು ಗುರಿ ಮಾಡಿ ದಾಳಿ ಮಾಡಲಾಗುತ್ತಿದೆ ಎಂದು ಟೆಲಿಗ್ರಾಂ ಚಾನಲ್ ನಲ್ಲಿ ಐಡಿಎಫ್ ಪ್ರಕಟಿಸಿದೆ.

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಅಪಾರ ಸಾವು ನೋವು ಸಂಭವಿಸಿದೆ ಎಂದು ಹೇಳಲಾಗಿದೆ. ಸಿಡಾನ್ ಸಮೀಪದ ಪರಿಹಾರ ಶಿಬಿರದ ಮೇಲೆ ನಡೆದ ದಾಳಿಯಲ್ಲಿ ಕನಿಷ್ಠ ಇಬ್ಬರು ಮೃತಪಟ್ಟಿದ್ದಾರೆ. ಪ್ರತ್ಯೇಕ ಘಟನೆಯಲ್ಲಿ ಅಡ್ಲಾನ್ ಪಟ್ಟಣದ ಮೇಲೆ ನಡೆದ ದಾಳಿಯಲ್ಲಿ ನಾಲ್ವರು ಮೃತಪಟ್ಟು, ಒಬ್ಬರು ಗಾಯಗೊಂಡಿದ್ದಾರೆ. ಹಬ್ಬೌಶ್ ಪಟ್ಟಣದ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಮೂವರು ಜೀವ ಕಳೆದುಕೊಂಡಿದ್ದಾರೆ.

Tags

Dronefuel tankfire breaks outKuwait airport
share
ವಾರ್ತಾಭಾರತಿ
ವಾರ್ತಾಭಾರತಿ
Next Story
X