ಗಾಝಾ: ಇಸ್ರೇಲ್ ದಾಳಿಯಲ್ಲಿ ಕನಿಷ್ಠ 25 ಮಂದಿ ಮೃತ್ಯು

PC : NDTV
ಗಾಝಾ, ಆ.23: ಗಾಝಾದಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 25 ಫೆಲೆಸ್ತೀನೀಯರು ಸಾವನ್ನಪ್ಪಿರುವುದಾಗಿ ಸ್ಥಳೀಯ ಆಸ್ಪತ್ರೆಯ ಮೂಲಗಳು ಶನಿವಾರ ಹೇಳಿವೆ.
ದಕ್ಷಿಣ ಗಾಝಾದ ಖಾನ್ ಯೂನಿಸ್ ನಗರದಲ್ಲಿ ಸ್ಥಳಾಂತರಗೊಂಡವರು ಆಶ್ರಯ ಪಡೆದಿದ್ದ ಡೇರೆಗಳನ್ನು ಗುರಿಯಾಗಿಸಿ ನಡೆದ ದಾಳಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ.
ಉತ್ತರ ಗಾಝಾದ ಝಿಕಿಮ್ ಗಡಿದಾಟು (ಬಾರ್ಡರ್ ಕ್ರಾಸಿಂಗ್) ಬಳಿ ವಿಶ್ವಸಂಸ್ಥೆಯ ಆಹಾರ ನೆರವು ಪಡೆಯಲು ನಿಂತಿದ್ದ ಜನರತ್ತ ಇಸ್ರೇಲ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಗಾಝಾ ಪ್ರದೇಶದ ಇತರೆಡೆ ನಡೆದ ದಾಳಿಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ಫೆಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಅಧಿಕಾರಿಗಳು ಹೇಳಿದ್ದಾರೆ.
Next Story





