ಗಾಝಾ | ಇಸ್ರೇಲ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಹಿತ ನಾಲ್ವರು ಮೃತ್ಯು

Photo Credit : AP
ಗಾಝಾ ಸಿಟಿ, ಜು.30: ಗಾಝಾ ಪಟ್ಟಿಯಾದ್ಯಂತ ಗುರುವಾರ ಇಸ್ರೇಲ್ ನಡೆಸಿದ ದಾಳಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಗಾಝಾದ ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ.
ಗಾಝಾ ಸಿಟಿಯ ಯಾರಮೂಕ್ ಕ್ರೀಡಾಂಗಣದ ಬಳಿಯಿರುವ ಸಂತ್ರಸ್ತರ ಶಿಬಿರದ ಹತ್ತಿರ ನಡೆದ ವೈಮಾನಿಕ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು, 10 ಜನರು ಗಾಯಗೊಂಡಿದ್ದಾರೆ.
ದಕ್ಷಿಣ ಗಾಝಾದ ಖಾನ್ ಯೂನಿಸ್ ನಗರದಲ್ಲಿ ಟೆಂಟ್ ಒಂದನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದ್ದು ಎಂಟು ವರ್ಷದ ಬಾಲಕಿ ಸೇರಿದಂತೆ ಇಬ್ಬರು ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ. ಬುರೇಜ್ ನಿರಾಶ್ರಿತರ ಶಿಬಿರದ ಪುರಸಭೆ ಕಟ್ಟಡದ ಬಳಿಯ ಅಪಾರ್ಟ್ಮೆಂಟ್ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಮಗು ಮೃತಪಟ್ಟಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ವೈದ್ಯಕೀಯ ಮೂಲಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
Next Story




