Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಾಗತಿಕ ಹಸಿವಿನ ಬಿಕ್ಕಟ್ಟು ತೀವ್ರ...

ಜಾಗತಿಕ ಹಸಿವಿನ ಬಿಕ್ಕಟ್ಟು ತೀವ್ರ ಹೆಚ್ಚಳ; ವಿಶ್ವಸಂಸ್ಥೆ ಆಹಾರ ಯೋಜನೆ ವರದಿ

ಪ್ರಪಂಚದಾದ್ಯಂತ ಹತ್ತು ಜನರಲ್ಲಿ ಒಬ್ಬರು ಪ್ರತೀ ರಾತ್ರಿ ಹಸಿವಿನಿಂದ ಮಲಗುವ ಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ15 Sept 2023 11:09 PM IST
share
ಜಾಗತಿಕ ಹಸಿವಿನ ಬಿಕ್ಕಟ್ಟು ತೀವ್ರ ಹೆಚ್ಚಳ; ವಿಶ್ವಸಂಸ್ಥೆ ಆಹಾರ ಯೋಜನೆ ವರದಿ
Global hunger crisis increases sharply; United Nations Food Program Report

ಜಿನೆವಾ: ಪ್ರಪಂಚದಾದ್ಯಂತ ಹತ್ತು ಜನರಲ್ಲಿ ಒಬ್ಬರು ಪ್ರತೀ ರಾತ್ರಿ ಹಸಿವಿನಿಂದ ಮಲಗುವ ಸ್ಥಿತಿಯಿದೆ. 700 ದಶಲಕ್ಷಕ್ಕೂ ಅಧಿಕ ಜನರು ಹಸಿವಿನ ಸಂಕಟದಲ್ಲಿದ್ದು ಮಾನವೀಯ ನೆರವಿನ ನಿಧಿಗೆ ಕೊಡುಗೆ ಕ್ಷೀಣಿಸುತ್ತಿರುವುದು ಈ ಸಮಸ್ಯೆಯನ್ನು ಮತ್ತಷ್ಟು ಭಯಾನಕವಾಗಿಸಿದೆ ಎಂದು ವಿಶ್ವಸಂಸ್ಥೆ ಆಹಾರ ಯೋಜನೆ(ಡಬ್ಲ್ಯೂಎಫ್‍ಪಿ) ಕಾರ್ಯನಿರ್ವಾಹಕ ನಿರ್ದೇಶಕಿ ಸಿಂಡಿ ಮೆಕೈನ್ ಕಳವಳ ವ್ಯಕ್ತಪಡಿಸಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು `ಹಣಕಾಸಿನ ಕೊರತೆಯಿಂದಾಗಿ ಲಕ್ಷಾಂತರ ಮಂದಿಗೆ ಆಹಾರ ಪಡಿತರವನ್ನು ಕಡಿತಗೊಳಿಸುವ ಅನಿವಾರ್ಯತೆಗೆ ನಾವು ಸಿಲುಕಿದ್ದೇವೆ. ಮುಂದಿನ ದಿನಗಳಲ್ಲಿ ಪಡಿತರದಲ್ಲಿ ಇನ್ನಷ್ಟು ಕಡಿತವಾಗುವ ಸಾಧ್ಯತೆಯಿದೆ. ನಾವೀಗ ಜಾಗತಿಕ ಮಾನವೀಯ ಅಗತ್ಯಗಳನ್ನು ಉತ್ತೇಜಿಸುವ ಏಕಕಾಲೀನ ಮತ್ತು ದೀರ್ಘಾವಧಿಯ ಬಿಕ್ಕಟ್ಟುಗಳ ಸರಣಿಯೊಂದಿಗೆ ಜೀವಿಸುತ್ತಿದ್ದೇವೆ. ಇದು ಮಾನವೀಯ ಸಮುದಾಯದ ಹೊಸ ವಾಸ್ತವಿಕತೆಯಾಗಿದೆ. ಈ ಪರಿಸ್ಥಿತಿ ಮುಂದಿನ ಹಲವು ವರ್ಷ ಮುಂದುವರಿಯುವ ನಿರೀಕ್ಷೆಯಿದೆ ' ಎಂದರು.

ಸಾಂಕ್ರಾಮಿಕ ರೋಗ, ಉಕ್ರೇನ್‍ನಲ್ಲಿನ ಯುದ್ಧದಿಂದ ಉಂಟಾದ ಆರ್ಥಿಕ ಸಮಸ್ಯೆಯು ಆಹಾರದ ಬೆಲೆಯನ್ನು ಜಗತ್ತಿನಾದ್ಯಂತ ಕೋಟ್ಯಾಂತರ ಜನರ ಕೈಗೆ ನಿಲುಕದಷ್ಟು ಎತ್ತರಕ್ಕೇರಿಸಿದೆ. ಇದೇ ವೇಳೆ, ರಸಗೊಬ್ಬರದ ದರ ಏರಿಕೆಯು ಮೆಕ್ಕೆಜೋಳ, ಅಕ್ಕಿ, ಸೋಯಾಬೀನ್ ಮತ್ತು ಗೋಧಿಯ ಉತ್ಪಾದನೆ ಕುಸಿಯಲು ಆರಂಭವಾಗಿದೆ. ಹಸಿವು ಮತ್ತು ಬಡತನವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಮತ್ತು ದೀರ್ಘಾವಧಿಯಲ್ಲಿ ಮಾನವೀಯ ಅಗತ್ಯಗಳನ್ನು ಕಡಿಮೆ ಮಾಡಲು ಮಹಾತ್ವಾಕಾಂಕ್ಷೆಯ, ಬಹುವಲಯ ಪಾಲುದಾರಿಕೆಯನ್ನು ಹೆಚ್ಚಿಸುವ ಸವಾಲು ನಮ್ಮ ಎದುರಿಗಿದೆ ಎಂದು ಸಿಂಡಿ ಮೆಕೈನ್ ಹೇಳಿದ್ದಾರೆ.

ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಮಾನವೀಯ ನೆರವಿನ ಉಪಕ್ರಮದ ಮೇಲೆ ಗಮನ ಕೇಂದ್ರೀಕರಿಸುವ ಜತೆಗೆ, ಅಗತ್ಯವಿರುವವರಿಗೆ ನೆರವು ಒದಗಿಸುವ ನವೀನ ಯೋಜನೆಯನ್ನು ರೂಪಿಸುವುದು ಅತ್ಯಗತ್ಯವಾಗಿದೆ ಎಂದವರು ಆಗ್ರಹಿಸಿದ್ದಾರೆ.

ಅಪೌಷ್ಟಿಕತೆಯ ಸಮಸ್ಯೆ: 50ಕ್ಕೂ ಅಧಿಕ ದೇಶಗಳ ಸುಮಾರು 47 ದಶಲಕ್ಷ ಜನತೆ ಬರಗಾಲದಿಂದ ಒಂದು ಹೆಜ್ಜೆಯಷ್ಟು ಹಿಂದಿದ್ದಾರೆ. ಜತೆಗೆ, 5 ವರ್ಷದೊಳಗಿನ 45 ದಶಲಕ್ಷ ಮಕ್ಕಳು ತೀವ್ರ ಅಪೌಷ್ಟಿಕತೆಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸುಮಾರು 79 ದೇಶಗಳ 783 ದಶಲಕ್ಷ ಜನತೆಗೆ ಈ ವರ್ಷ ಅಧಿಕಮಟ್ಟದ ಆಹಾರ ಅಭದ್ರತೆ ಕಾಡುತ್ತಿದೆ. ಇದು 2021ಕ್ಕೆ(ಕೋವಿಡ್ ಸೋಂಕಿನ ಆರಂಭಕ್ಕೂ ಮುನ್ನ) ಹೋಲಿಸಿದರೆ ಸುಮಾರು 200 ದಶಲಕ್ಷದಷ್ಟು ಏರಿಕೆಯಾಗಿದೆ. ಘರ್ಷಣೆ, ಆರ್ಥಿಕ ಆಘಾತ, ಹವಾಮಾನ ವೈಪರೀತ್ಯ ಮತ್ತು ಗೊಬ್ಬರಗಳ ಬೆಲೆಯಲ್ಲಿ ಏರಿಕೆ- ಈ ಎಲ್ಲಾ ಸಮಸ್ಯೆಗಳ ಸರಮಾಲೆ ಈ ಏರಿಕೆಗೆ ಪ್ರಧಾನ ಕಾರಣವಾಗಿದೆ ಎಂದು ವಿಶ್ವಸಂಸ್ಥೆ ಏಜೆನ್ಸಿ ಹೇಳಿದೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X