ಅಮೆರಿಕದ ನಾಗರಿಕ ಹಕ್ಕುಗಳ ವಿಭಾಗದ ಮುಖ್ಯಸ್ಥೆ ಸ್ಥಾನಕ್ಕೆ ಹರ್ಮೀತ್ ಧಿಲ್ಲೋನ್ ರಾಜೀನಾಮೆ

ಹರ್ಮೀತ್ ಕೌರ್ ಧಿಲ್ಲೋನ್ | Photo Credit : Reuters
ವಾಶಿಂಗ್ಟನ್, ನ. 6: ಮಧ್ಯಂತರ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷವು ತೀವ್ರ ಹಿನ್ನಡೆ ಅನುಭವಿಸಿದ ನಂತರ, ಅಮೆರಿಕ ನ್ಯಾಯಾಂಗ ಇಲಾಖೆಯ ನಾಗರಿಕ ಹಕ್ಕುಗಳ ವಿಭಾಗದ ಮುಖ್ಯಸ್ಥೆಯಾಗಿದ್ದ ಭಾರತೀಯ ಮೂಲದ ಹರ್ಮೀತ್ ಕೌರ್ ಧಿಲ್ಲೋನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಟ್ರಂಪ್ ಆಡಳಿತದಿಂದ ನಿರ್ಗಮಿಸಿದ ಮೊದಲ ಹಿರಿಯ ಅಧಿಕಾರಿ ಎನಿಸಿಕೊಂಡಿದ್ದಾರೆ.
ತಾವು ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಶ್ವೇತಭವನದ ಅಧಿಕಾರಿಗಳ ಕೋರಿಕೆಯ ಮೇರೆಗೆ ಚುನಾವಣೆ ಮುಗಿಯುವವರೆಗೆ ಈ ವಿಷಯವನ್ನು ಬಹಿರಂಗಪಡಿಸಿರಲಿಲ್ಲ ಎಂದು ಧಿಲ್ಲೋನ್ ತಿಳಿಸಿರುವುದಾಗಿ 'ಫಾಕ್ಸ್ ನ್ಯೂಸ್' ವರದಿ ಮಾಡಿದೆ. ತಮ್ಮ ರಾಜೀನಾಮೆಗೆ ಯಾವುದೇ ನಿರ್ದಿಷ್ಟ ಕಾರಣವನ್ನು ನೀಡದ ಅವರು, ಈ ನಿರ್ಧಾರ ಸಂಪೂರ್ಣವಾಗಿ ತಮ್ಮದೇ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
Next Story




