Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜಗತ್ತಿನಾದ್ಯಂತ ಪ್ರತಿದಿನ 100 ಕೋಟಿ...

ಜಗತ್ತಿನಾದ್ಯಂತ ಪ್ರತಿದಿನ 100 ಕೋಟಿ ಊಟಗಳು ವ್ಯರ್ಥವಾಗುತ್ತಿವೆ!

► ಆದರೂ ಮಾನವ ಕುಲದ ಮೂರನೇ ಒಂದರಷ್ಟು ಭಾಗಕ್ಕೆ ಆಹಾರದ ಅಭದ್ರತೆ ಎಂದು ವಿಶ್ವಸಂಸ್ಥೆಯ ಪರಿಸರ ಏಜೆನ್ಸಿ ವರದಿ ► ಆಹಾರ ವ್ಯರ್ಥವಾಗುವಿಕೆಯ ಪ್ರಮಾಣವು ಮನೆಗಳಲ್ಲಿ ಗರಿಷ್ಠ | ಸರಾಸರಿ ಪ್ರತಿಯೊಬ್ಬ ವ್ಯಕ್ತಿಯಿಂದ ವರ್ಷಕ್ಕೆ 79 ಕೆ.ಜಿ. ಆಹಾರ ವ್ಯರ್ಥ

ವಾರ್ತಾಭಾರತಿವಾರ್ತಾಭಾರತಿ28 March 2024 11:35 PM IST
share
ಜಗತ್ತಿನಾದ್ಯಂತ ಪ್ರತಿದಿನ 100 ಕೋಟಿ ಊಟಗಳು ವ್ಯರ್ಥವಾಗುತ್ತಿವೆ!

ವಿಶ್ವಸಂಸ್ಥೆ : ದಿನಂಪ್ರತಿ ಜಾಗತಿಕವಾಗಿ ಪ್ರತಿದಿನ 100 ಕೋಟಿ ಊಟಗಳು ವ್ಯರ್ಥವಾಗಿ ಹೋಗುತ್ತಿವೆ. ಇನ್ನೊಂದೆಡೆ ಜಗತ್ತಿನ ಮಾನವಕುಲದ ಮೂರನೇ ಒಂದು ಭಾಗವು ಆಹಾರದ ಅಭದ್ರತೆಯನ್ನು ಎದುರಿಸುತ್ತಿದೆ ಎಂದು ವಿಶ್ವಸಂಸ್ಥೆಯ ಪರಿಸರ ಏಜೆನ್ಸಿ (ಯುನ್ಇಪಿ)ಯ 2024ನೇ ಸಾಲಿನ ಆಹಾರ ವ್ಯರ್ಥ ಸೂಚ್ಯಂಕವು ಬಹಿರಂಗಪಡಿಸಿದೆ. 2022ರಲ್ಲಿ 1.05 ಶತಕೋಟಿ ಟನ್ ಆಹಾರ ವ್ಯರ್ಥವಾಗಿತ್ತೆಂದು ಅದು ಹೇಳಿದೆ.

ರಿಟೇಲ್, ಆಹಾರ ಸೇವೆ ಹಾಗೂ ಮನೆಗಳ ಮಟ್ಟದಲ್ಲಿ ಬಳಕೆದಾರರಿಗೆ ಲಭ್ಯವಾಗಬೇಕಿದ್ದ ಶೇ.19ರಷ್ಟು ಆಹಾರವು ನಷ್ಟವಾಗಿ ಹೋಗಿದೆ. ಆಹಾರ ಪೂರೈಕೆ ಸರಪಣಿಯಲ್ಲಿ ಶೇ.13ರಷ್ಟು ಆಹಾರ ಪೋಲಾಗಿದೆ ಎಂದು ವಿಶ್ವಸಂಸ್ಥೆಯ ಆಹಾರ ಹಾಗೂ ಕೃಷಿ ಸಂಘಟನೆಯ ವರದಿ ಅಂದಾಜಿಸಿರುವುದಾಗಿ ವರದಿ ತಿಳಿಸಿದೆ.

‘‘ಆಹಾರ ವ್ಯರ್ಥವಾಗುವಿಕೆಯು ಜಾಗತಿಕ ದುರಂತವಾಗಿದೆ. ಜಗತ್ತಿನಾದ್ಯಂತ ಒಂದು ಶತಕೋಟಿಗೂ ಅಧಿಕ ಆಹಾರ ವ್ಯರ್ಥವಾಗುತ್ತಿರುವಂತೆಯೇ, ಪ್ರತಿದಿನವೂ ಕೋಟ್ಯಂತರ ಮಂದಿ ಹಸಿದ ಹೊಟ್ಟೆಯಲ್ಲಿ ಮಲಗುತ್ತಿದ್ದಾರೆ ಎಂದು ಯುಎನ್ಇಪಿ ಹೇಳಿದೆ. ಈ ಪ್ರಚಲಿತ ಸಮಸ್ಯೆಯು ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಜೊತೆಗೆ, ಹವಾಮಾನ ಬದಲಾವಣೆ, ಜೀವವೈವಿಧ್ಯತೆಗೆ ಹಾನಿ ಹಾಗೂ ಪರಿಸರ ಮಾಲಿನ್ಯದಂತಹ ಸಮಸ್ಯೆಗಳು ಉಲ್ಬಣಗೊಳ್ಳುವಂತೆ ಮಾಡಿದೆ ಎಂದು ಯುಎನ್ಇಪಿಯ ಆಡಳಿತ ನಿರ್ದೇಶಕ ಇಂಗರ್ ಆ್ಯಂಡರ್ಸನ್ ತಿಳಿಸಿದ್ದಾರೆ.

ಜಗತ್ತಿನಾದ್ಯಂತ ಮನೆಗಳಲ್ಲಿಯೇ ಅತ್ಯಧಿಕ ಪ್ರಮಾಣದ ಆಹಾರವು ವ್ಯರ್ಥವಾಗುತ್ತಿದ್ದು, ಅದರ ಪ್ರಮಾಣ 631 ದಶಲಕ್ಷ ಟನ್ ಗಳಾಗಿವೆ. ಆಹಾರ ಸೇವಾ ಹಾಗೂ ರಿಟೇಲ್ ವಲಯಗಳಲ್ಲಿ ಕ್ರಮವಾಗಿ 290 ಹಾಗೂ 131 ದಶಲಕ್ಷ ಟನ್ ಆಹಾ ಹಾಳಾಗಿ ಹೋಗುತ್ತಿದೆ. ಸರಾಸರಿಯಾಗಿ ಪ್ರತಿಯೊಬ್ಬ ವ್ಯಕ್ತಿಯು ವಾರ್ಷಿಕವಾಗಿ 79 ಕೆ.ಜಿ. ಆಹಾರವನ್ನು ವ್ಯರ್ಥ ಮಾಡುತ್ತಿದ್ದು, ಇದು ಹಸಿವಿನಿಂದ ಬಾಧಿತವಾಗಿರುವ ಜಗತ್ತಿನಲ್ಲಿ ಪ್ರತಿದಿನದ 1.3 ಊಟದ ಪ್ರಮಾಣಕ್ಕೆ ಸಮಾನವಾದುದಾಗಿದೆ ಎಂದು ವರದಿ ಗಮನಸೆಳೆದಿದೆ.

ಆಹಾರ ವ್ಯರ್ಥವಾಗುವಿಕೆಯ ಸಮಸ್ಯೆಯ ಕೇವಲ ಶ್ರೀಮಂತ ರಾಷ್ಟ್ರಗಳಿಗಷ್ಟೇ ಸೀಮಿತವಾಗಿಲ್ಲ. ಅಧಿಕ ಆದಾಯ, ಮೇಲ್ ಮಧ್ಯಮ ಆದಾಯ ಹಾಗೂ ಕೆಳ-ಮಧ್ಯಮ ಆದಾಯದ ದೇಶಗಳ ಮನೆಗಳಲ್ಲಿ ವಾರ್ಷಿಕವಾಗಿ ಸರಾಸರಿ ತಲಾ 7 ಕೆ.ಜಿ.ಯಷ್ಟು ಆಹಾರ ವ್ಯರ್ಥವಾಗುತ್ತಿದೆ.

ಮಧ್ಯಮ ಆದಾಯದ ರಾಷ್ಟ್ರಗಳಲ್ಲಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾನ್ಯ ಆಹಾರದ ಪೋಲಾಗುವಿಕೆಯು ಕಡಿಮೆ ಪ್ರಮಾಣದಲ್ಲಿದೆ. ಪ್ರಾಣಿಗಳಿಗೆ, ಜಾನುವಾರುಗಳಿಗೆ ಹಾಗೂ ಮನೆಯ ಸಾವಯವಗೊಬ್ಬರಕ್ಕೆ ಅವುಗಳನ್ನು ಪುನರ್ಬಳಕೆ ಮಾಡುವುದು ಇದಕ್ಕೆ ಕಾರಣವಾಗಿದೆ. ಹೀಗಾಗಿ ನಗರ ಪ್ರದೇಶಗಳಲ್ಲಿಯೂ ಆಹಾರ ವ್ಯರ್ಥವನ್ನು ಕಡಿಮೆಗೊಳಿಸಲು ಹಾಗೂ ಸಾವಯವ ಗೊಬ್ಬರ ಉತ್ಪಾದನೆಗೆ ತೀವ್ರ ಗಮನಹರಿಸಬೇಕಾಗಿದೆ ಎಂದು ವರದಿ ಶಿಫಾರಸು ಮಾಡಿದೆ. ಅಧಿಕ ತಾಪಮಾನದ ದೇಶಗಳಲ್ಲಿ ಆಹಾರ ವ್ಯರ್ಥವಾಗುವಿಕೆಯು ಪ್ರಮಾಣವು ಅಧಿಕವಾಗಿರುತ್ತದೆಯೆಂದು ವರದಿಯು ಗಮನಸೆಳೆದಿದೆ.

ಆಹಾರ ವ್ಯರ್ಥವನ್ನು ಕಡಿಮೆಗಲಿಸಲು ಸಾರ್ವಜನಿಕ ಹಾಗೂ ಖಾಸಗಿ ಪಾಲುದಾರಿಕೆಯಲ್ಲಿ ಯೋಜನೆಗಳನು ರೂಪಿಸಬೇಕು ಎಂದು ವರದಿ ಶಿಫಾರಸು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X