Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹೌದಿ ಸ್ವತಂತ್ರ ಸಂಘಟನೆ: ಇರಾನ್...

ಹೌದಿ ಸ್ವತಂತ್ರ ಸಂಘಟನೆ: ಇರಾನ್ ಪ್ರತಿಪಾದನೆ

ವಾರ್ತಾಭಾರತಿವಾರ್ತಾಭಾರತಿ10 Sept 2026 10:00 PM IST
share
ಹೌದಿ ಸ್ವತಂತ್ರ ಸಂಘಟನೆ: ಇರಾನ್ ಪ್ರತಿಪಾದನೆ

ಟೆಹರಾನ್: ಯೆಮೆನ್‍ನ ಹೌದಿ ಬಂಡುಕೋರರು `ಇರಾನ್‍ನ ಏಜೆಂಟರು ಮತ್ತು ಪ್ರಾಕ್ಸಿಗಳು (ಪ್ರತಿನಿಧಿಗಳು)'. ಸೌದಿ ಅರೇಬಿಯಾ ಮೇಲಿನ ಇತ್ತೀಚಿನ ಹೌದಿ ದಾಳಿಗಳ ಹಿಂದೆ ಇರಾನ್ ಕೈವಾಡ ಸ್ಪಷ್ಟವಾಗಿದೆ ಎಂಬ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ ಅವರ ಹೇಳಿಕೆಯನ್ನು ಇರಾನ್ ಗುರುವಾರ ತಿರಸ್ಕರಿಸಿದ್ದು, ಆ ಗುಂಪು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯಾರಿಂದಲೂ ಆದೇಶಗಳನ್ನು ಪಡೆಯುವುದಿಲ್ಲ ಎಂದು ಪ್ರತಿಪಾದಿಸಿದೆ.

ರೂಬಿಯೋ ಅವರ ಸುಳ್ಳುಗಳು ಸತ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ. ಹೌದಿ ಒಂದು ಸ್ವತಂತ್ರ ಯೆಮನ್ ಸಂಘಟನೆಯಾಗಿದ್ದು, ಅದು ತನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಅದು ಯಾರಿಂದಲೂ ಆದೇಶಗಳನ್ನು ಪಡೆಯುವುದಿಲ್ಲ ಮತ್ತು ಯಾರ ಪ್ರಾಕ್ಸಿಯಾಗಿಯೂ ಕೆಲಸ ಮಾಡುವುದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವಾಲಯದ ವಕ್ತಾರ ಇಸ್ಮಾಯಿಲ್ ಬಘಾಯೀ `ಎಕ್ಸ್' ನಲ್ಲಿ ಪೋಸ್ಟ್ ಮಾಡಿದ್ದಾರೆ.

ಹೌದಿ ಬೆದರಿಕೆ ನಿಷ್ಕ್ರಿಯಗೊಳಿಸಲು ಯೆಮನ್ ಒಕ್ಕೂಟ ಪಣ

ಸೌದಿ ಅರೇಬಿಯಾದ ಮೇಲೆ ಮಂಗಳವಾರ ಹೌದಿಗಳು ನಡೆಸಿದ ದಾಳಿಯನ್ನು `ಯೆಮನ್‍ನಲ್ಲಿ ಕಾನೂನು ಬದ್ಧತೆಗೆ ಬೆಂಬಲ ನೀಡುವ ಒಕ್ಕೂಟ' ತೀವ್ರವಾಗಿ ಖಂಡಿಸಿದ್ದು, ಈ ಬೆದರಿಕೆಯನ್ನು ನಿಷ್ಕ್ರಿಯಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಾಗಿ ಪಣ ತೊಟ್ಟಿದೆ.

ಹೌದಿ ಬಂಡುಕೋರರು ನಡೆಸಿರುವ ಈ ದಾಳಿ ಅಪಾಯಕಾರಿ ಬೆಳವಣಿಗೆಯಾಗಿದ್ದು, ಇದು ಆ ಭಯೋತ್ಪಾದಕ ಗುಂಪಿನ ಶತ್ರುತ್ವ ಮತ್ತು ಜವಾಬ್ದಾರಿರಹಿತ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಒಕ್ಕೂಟದ ವಕ್ತಾರ ಮೇಜರ್ ಜನರಲ್ ತುರ್ಕಿ ಅಲ್-ಮಲ್ಕಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೌದಿಗಳು ದಕ್ಷಿಣದ ನಾಲ್ಕು ನಗರಗಳ ಮೇಲೆ ಡ್ರೋನ್ ಹಾಗೂ ಕ್ಷಿಪಣಿಗಳನ್ನು ಉಡಾಯಿಸಿದ್ದಲ್ಲದೆ, ಇಂಧನ ಸೌಲಭ್ಯಗಳ ಮೇಲೆಯೂ ದಾಳಿ ನಡೆಸಿದ್ದು ಒಟ್ಟು 73 ನಾಗರಿಕರು ಗಾಯಗೊಂಡಿದ್ದಾರೆ. ಈ ಕೃತ್ಯವು ಸೌದಿ ಸಾರ್ವಭೌಮತ್ವದ ಬಹಿರಂಗ ಉಲ್ಲಂಘನೆ ಹಾಗೂ ದೇಶದ ನಾಗರಿಕರು ಮತ್ತು ನಿವಾಸಿಗಳ ಭದ್ರತೆಗೆ ಎದುರಾಗಿರುವ ನೇರ ಬೆದರಿಕೆಯಾಗಿದೆ. ಬೆದರಿಕೆಯ ಮೂಲಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಮತ್ತು ಅದರ ಅಪಾಯವನ್ನು ನಿಷ್ಕ್ರಿಯಗೊಳಿಸಲು ಒಕ್ಕೂಟದ ಜಂಟಿ ಪಡೆಗಳ ಕಮಾಂಡ್ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.

Tags

HouthisIran
share
ವಾರ್ತಾಭಾರತಿ
ವಾರ್ತಾಭಾರತಿ
Next Story
X