ಅಮೆರಿಕದಲ್ಲಿ ಶೂಟೌಟ್: ಇಬ್ಬರ ಸಾವು; ಐವರಿಗೆ ಗಾಯ

ಸಾಂದರ್ಭಿಕ ಚಿತ್ರ
ನ್ಯೂಯಾರ್ಕ್: ಇಂಡಿಯಾನಪೊಲಿಸ್ ನಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಇತರ ಐದು ಮಂದಿ ಗಾಯಗೊಂಡಿರುವುದಾಗಿ ಮೂಲಗಳನ್ನು ಉಲ್ಲೇಖಿಸಿ `ಫಾಕ್ಸ್ 19' ವರದಿ ಮಾಡಿದೆ.
ಅಮೆರಿಕದ ಸ್ವಾತಂತ್ರ್ಯ ದಿನಾಚರಣೆಯ ಮರುದಿನವೇ ಈ ಘಟನೆ ವರದಿಯಾಗಿದೆ. ದಾಳಿ ನಡೆದ ಸ್ಥಳದಲ್ಲಿಯೇ ಒಬ್ಬ ಮೃತಪಟ್ಟರೆ ಮತ್ತೊಬ್ಬ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಐವರು ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ. ಘಟನೆಗೆ ಸಂಬಂಧಿಸಿ 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
Next Story