ಇಸ್ರೇಲ್ ಮೇಲೆ ಮತ್ತೆ ದಾಳಿ ನಡೆಸಿದ ಇರಾನ್: ಟೆಲ್ ಅವಿವ್, ಹೈಫಾದಲ್ಲಿ ಕನಿಷ್ಟ 8 ಮಂದಿ ಸಾವು

Photo credit: PTI
ಟೆಲ್ ಅವಿವ್: ಇರಾನ್ ಸೇನೆಯು ಇಸ್ರೇಲ್ ಮೇಲೆ ಹೊಸದಾಗಿ ಮಾಡಿದ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿಗಳಲ್ಲಿ ಇಸ್ರೇಲ್ ನ ಟೆಲ್ ಅವೀವ್ ಮತ್ತು ಹೈಫಾ ನಗರದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಅಲ್ ಜಝೀರಾ ವರದಿ ಮಾಡಿದೆ.
ಇರಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 220 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಇದರಲ್ಲಿ 70 ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.
ಇಸ್ರೇಲ್ ರವಿವಾರ ನಡೆಸಿದ ದಾಳಿಯಲ್ಲಿ ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ನ ಗುಪ್ತಚರ ಮುಖ್ಯಸ್ಥ ಮತ್ತು ಇತರ ಇಬ್ಬರು ಜನರಲ್ಗಳು ಸಾವನ್ನಪ್ಪಿದ್ದಾರೆ.
Next Story





