Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕದ ನಿರ್ಬಂಧ ಜಾರಿಗೆ ತರದಂತೆ ಇತರ...

ಅಮೆರಿಕದ ನಿರ್ಬಂಧ ಜಾರಿಗೆ ತರದಂತೆ ಇತರ ದೇಶಗಳಿಗೆ ಇರಾನ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ28 Aug 2026 10:00 PM IST
share
ಅಮೆರಿಕದ ನಿರ್ಬಂಧ ಜಾರಿಗೆ ತರದಂತೆ ಇತರ ದೇಶಗಳಿಗೆ ಇರಾನ್ ಎಚ್ಚರಿಕೆ

ಟೆಹರಾನ್, ಆ.28: ಇರಾನ್ ವಿರುದ್ಧದ ಅಮೆರಿಕದ ನಿರ್ಬಂಧಗಳನ್ನು ಜಾರಿಗೆ ತರುವುದನ್ನು ತಪ್ಪಿಸುವುದು ಎಲ್ಲಾ ದೇಶಗಳ ಬಾಧ್ಯತೆಯಾಗಿದೆ ಮತ್ತು ಈ ನಿರ್ಬಂಧಗಳಲ್ಲಿ ಭಾಗವಹಿಸುವುದು ಸ್ವತಂತ್ರ ದೇಶಗಳ ಮೇಲೆ ಒಂದು ದೇಶದ ಅಕ್ರಮ ಇಚ್ಛೆಯನ್ನು ಹೇರುವ ಕ್ರಿಯೆಗೆ ಕುಮ್ಮಕ್ಕು ನೀಡಿದಂತಾಗುತ್ತದೆ ಎಂದು ಇರಾನ್‌ನ ವಿದೇಶಾಂಗ ಸಚಿವಾಲಯ ಎಚ್ಚರಿಸಿದೆ.

ಅಮೆರಿಕದ ಹೊಸ ಆರ್ಥಿಕ ಕ್ರಮಗಳು ಕಾನೂನುಬಾಹಿರ ಮತ್ತು ಸರಕಾರ ಪ್ರಾಯೋಜಿತ ಭಯೋತ್ಪಾದನೆ ಹಾಗೂ ಮಾನವೀಯತೆಯ ವಿರುದ್ಧದ ಅಪರಾಧವಾಗಿದ್ದು, ಇವು ಲಕ್ಷಾಂತರ ಸಾಮಾನ್ಯ ಜನರ ಆರೋಗ್ಯ ಮತ್ತು ಜೀವನೋಪಾಯವನ್ನು ತೀವ್ರ ಅಪಾಯಕ್ಕೆ ಸಿಲುಕಿಸುತ್ತವೆ ಎಂದು ಶುಕ್ರವಾರ `ಎಕ್ಸ್' ಖಾತೆಯಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ ಸಚಿವಾಲಯ ಖಂಡಿಸಿದೆ.

ಕಾನೂನಿನ ಆಡಳಿತವನ್ನು ಎತ್ತಿಹಿಡಿಯುವಂತೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಕರೆ ನೀಡಿದ ಇರಾನ್, ಅಮೆರಿಕ ಮತ್ತು ಇಸ್ರೇಲ್‌ ನ ಸಂಯೋಜಿತ ಮಿಲಿಟರಿ ಹಾಗೂ ಆರ್ಥಿಕ ದಾಳಿಯ ವಿರುದ್ಧ ತನ್ನನ್ನು ತಾನು ರಕ್ಷಿಸಿಕೊಳ್ಳಲು ತನ್ನೆಲ್ಲಾ ಸಾಮರ್ಥ್ಯಗಳನ್ನು ಬಳಸಿಕೊಳ್ಳುವುದಾಗಿ ಹೇಳಿದೆ.

ಈ ಮಧ್ಯೆ, ಅಮೆರಿಕ ತನ್ನ ಒತ್ತಡದ ತಂತ್ರವನ್ನು ಕೈಬಿಟ್ಟರೆ ಮಾತ್ರ ರಾಜತಾಂತ್ರಿಕ ಮಾತುಕತೆಗೆ ಸಿದ್ಧವಿರುವುದಾಗಿ ಇರಾನ್ ಶುಕ್ರವಾರ ಹೇಳಿದೆ. ‘ರಾಜತಾಂತ್ರಿಕತೆಯ ಹಾದಿಗೆ ಮತ್ತೆ ಮರಳುವುದು ಅಸಾಧ್ಯವೇನಲ್ಲ. ಅದು ಒಂದು ಸರಳ ಸತ್ಯವನ್ನು ಅಮೆರಿಕ ಅರ್ಥಮಾಡಿಕೊಳ್ಳುವುದರ ಮೇಲೆ ಅವಲಂಬಿತವಾಗಿದೆ. ಒತ್ತಡ ಹೇರುವುದರಿಂದ ಯಾವುದೇ ಪ್ರಯೋಜನವಿಲ್ಲ’ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಘ್ಚಿ ಶುಕ್ರವಾರ `ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.

‘ಅಮೆರಿಕವು ನಂಬಿಕೆಯನ್ನು ಬೆಳೆಸಿಕೊಳ್ಳಬೇಕು, ಗೌರವಯುತವಾಗಿ ಮಾತನಾಡಬೇಕು, ನಮ್ಮ ಹಕ್ಕುಗಳನ್ನು ಗುರುತಿಸಬೇಕು ಮತ್ತು ತನ್ನ ಬದ್ಧತೆಗಳನ್ನು ಎತ್ತಿಹಿಡಿಯಬೇಕು’ ಎಂದು ಅರಾಘ್ಚಿ ಆಗ್ರಹಿಸಿದ್ದಾರೆ.

Tags

Iran warnsUS sanctions
share
ವಾರ್ತಾಭಾರತಿ
ವಾರ್ತಾಭಾರತಿ
Next Story
X