ಇರಾನಿನ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ; ಇಸ್ರೇಲ್ ರಕ್ಷಣಾ ಸಚಿವ ಕಾಟ್ಝ್ ಹೇಳಿಕೆ

ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ | Photo Credit : aljazeera.com
ಟೆಹ್ರಾನ್, ಮಾ.17: ಇರಾನಿನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಝ್ ತಿಳಿಸಿದ್ದಾರೆ ಎಂದು Aljazeera ವರದಿ ಮಾಡಿದೆ.
ಮಂಗಳವಾರ ನೀಡಿದ ಹೇಳಿಕೆಯಲ್ಲಿ ಕಾಟ್ಝ್, ಲಾರಿಜಾನಿ ಹತ್ಯೆಯಾಗಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ. ಇರಾನ್ ಸರಕಾರ ಈ ಹೇಳಿಕೆಯನ್ನು ನಿರಾಕರಿಸಿದೆ. ಘಟನೆಯ ಸತ್ಯಾಸತ್ಯತೆ ಕುರಿತು ಸ್ಪಷ್ಟತೆ ಇನ್ನಷ್ಟೇ ಲಭ್ಯವಾಗಬೇಕಿದೆ
Next Story





