ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಚಿವ ಝಮೀರ್ ಅಹ್ಮದ್ ಖಾನ್

ಝಮೀರ್ ಅಹ್ಮದ್ ಖಾನ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ಹೊಸದಿಲ್ಲಿಯಿಂದ ತಮ್ಮ ನಿವಾಸಕ್ಕೆ ವಾಪಸಾಗುತ್ತಿದ್ದಂತೆ, ವಸತಿ ಸಚಿವ ಝಮೀರ್ ಅಹ್ಮದ್ ಖಾನ್ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ಇತ್ತೀಚಿಗೆ "ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ದುಡ್ಡು ಕೊಟ್ಟವರಿಗಷ್ಟೇ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ" ಎಂದು ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ಮಾಡಿದ್ದ ಭ್ರಷ್ಟಾಚಾರ ಆರೋಪಗಳ ಕುರಿತಂತೆ, ಝಮೀರ್ ಅಹ್ಮದ್ ಖಾನ್ ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಚರ್ಚೆ ನಡೆಸಿದರು ಎಂದು ತಿಳಿದು ಬಂದಿದೆ.
ಬಿ.ಆರ್.ಪಾಟೀಲ್ ಅವರು ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಝಮೀರ್, ಸಿಎಂಗೆ ಸ್ಪಷ್ಟನೆ ನೀಡದ್ದಾರೆ. ಅಲ್ಲದೆ, ಈ ವಿಚಾರವಾಗಿ ತಮ್ಮದೇನು ಪಾತ್ರವಿಲ್ಲ ಎಂದು ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಇದೇ ವೇಳೆ ಶಾಸಕರು ಏನಾದರೂ ಅಹವಾಲು ತಂದಾಗ ಸ್ವೀಕರಿಸಿ, ಸಾಧ್ಯವಾದಷ್ಟು ಕೆಲಸ ಮಾಡಿಕೊಡುವಂತೆ ಝಮೀರ್ ಗೆ ಸಿಎಂ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
Next Story





