ಮಧ್ಯ ಗಾಝಾದಿಂದ ಸ್ಥಳಾಂತರಗೊಳ್ಳಲು ಫೆಲೆಸ್ತೀನೀಯರಿಗೆ ಇಸ್ರೇಲ್ ಸೂಚನೆ

Photo Source : X@AbujomaaGaza
ಗಾಝಾ, ಜು.20: ಮಧ್ಯ ಗಾಝಾ ಪಟ್ಟಿಯಲ್ಲಿ ಹಮಾಸ್ ವಿರುದ್ಧ ಕಾರ್ಯಾಚರಣೆ ಸನ್ನಿಹಿತವಾಗಿರುವುದರಿಂದ ಅಲ್ಲಿ ನೆಲೆಸಿರುವ ಫೆಲೆಸ್ತೀನೀಯರು ತಕ್ಷಣ ಸ್ಥಳಾಂತರಗೊಳ್ಳುವಂತೆ ಇಸ್ರೇಲಿ ಮಿಲಿಟರಿ ರವಿವಾರ ಸೂಚನೆ ನೀಡಿರುವುದಾಗಿ ವರದಿಯಾಗಿದೆ.
ಡೀರ್ ಎಲ್-ಬಾಲಾ ಪ್ರದೇಶದಲ್ಲಿರುವ ನಿವಾಸಿಗಳು ಮತ್ತು ಸ್ಥಳಾಂತರಗೊಂಡ ಫೆಲೆಸ್ತೀನೀಯರು ತಕ್ಷಣ ಸ್ಥಳಾಂತರಗೊಳ್ಳಬೇಕು. ಈ ಪ್ರದೇಶದಲ್ಲಿ ಇಸ್ರೇಲ್ ತನ್ನ ಕಾರ್ಯಾಚರಣೆಯನ್ನು ವಿಸ್ತರಿಸಲಿದೆ. ಆದ್ದರಿಂದ ಫೆಲೆಸ್ತೀನೀಯರು ತಮ್ಮ ಸುರಕ್ಷತೆಗಾಗಿ ದಕ್ಷಿಣ ಗಾಝಾದ ಅಲ್-ಮವಾಸಿ ಪ್ರದೇಶಕ್ಕೆ ತೆರಳಬೇಕು ಎಂದು ಇಸ್ರೇಲ್ ಮಿಲಿಟರಿಯ ವಕ್ತಾರರು `ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಸಂದೇಶದಲ್ಲಿ ಸೂಚಿಸಿದ್ದಾರೆ.
Next Story





