ಗಾಝಾ: ಇಸ್ರೇಲ್ ದಾಳಿಯಲ್ಲಿ 10 ಮಂದಿ ಮೃತ್ಯು

PC : aljazeera.com
ಗಾಝಾ: ಗಾಝಾ ಪಟ್ಟಿಯಲ್ಲಿ ಶನಿವಾರ ತಡರಾತ್ರಿಯಿಂದ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸಹಿತ ಕನಿಷ್ಠ 10 ಮಂದಿ ಸಾವನ್ನಪ್ಪಿರುವುದಾಗಿ ಸ್ಥಳೀಯ ಆರೋಗ್ಯಾಧಿಕಾರಿಗಳು ಹೇಳಿದ್ದಾರೆ.
ದಕ್ಷಿಣ ಗಾಝಾ ಪಟ್ಟಿಯ ಖಾನ್ ಯೂನಿಸ್ ನಗರದ ಶಿಬಿರಗಳನ್ನು ಗುರಿಯಾಗಿಸಿ ನಡೆದ ಎರಡು ದಾಳಿಗಳಲ್ಲಿ 4 ಮಕ್ಕಳ ಸಹಿತ 8 ಮಂದಿ ಮೃತಪಟ್ಟರೆ, ಪ್ರತ್ಯೇಕ ದಾಳಿಯಲ್ಲಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಹಾಗೂ ಮಗು ಸಾವನ್ನಪ್ಪಿದೆ ಎಂದು ನಾಸೆರ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಹಮಾಸ್ ಕಾರ್ಯಕರ್ತರನ್ನು ಮಾತ್ರ ಗುರಿಯಾಗಿಸಿ ದಾಳಿ ನಡೆಸುತ್ತಿರುವುದಾಗಿ ಇಸ್ರೇಲ್ ಸೇನೆ ಪ್ರತಿಪಾದಿಸಿದೆ.
Next Story





