ಟ್ರಂಪ್ ಕದನ ವಿರಾಮ ಘೋಷಿಸಿದ ನಂತರ ಇರಾನ್ ದಾಳಿಗೆ ಮೂವರು ಮೃತ್ಯು: ಇಸ್ರೇಲ್

Photo | Reuters
ಜೆರುಸಲೇಮ್ : ಟ್ರಂಪ್ ಕದನ ವಿರಾಮ ಘೋಷಿಸಿದ ಬಳಿಕ ಇರಾನ್ ನಡೆಸಿದ ದಾಳಿಯಲ್ಲಿ ಮೂವರು ಮೃತಪಟ್ಟಿದ್ದಾರೆ ಎಂದು ಇಸ್ರೇಲ್ ಹೇಳಿದೆ.
ಇಸ್ರೇಲ್ ಮತ್ತು ಇರಾನ್ ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದರು. ಆದರೆ, ಕದನ ವಿರಾಮ ಅಥವಾ ಮಿಲಿಟರಿ ಕಾರ್ಯಾಚರಣೆಗಳ ನಿಲುಗಡೆಗೆ ಕುರಿತ ಯಾವುದೇ ಒಪ್ಪಂದ ನಡೆದಿಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಹೇಳಿದ್ದಾರೆ.
ಬೆಳಗಿನ ಜಾವ ಇರಾನ್ ನಡೆಸಿದ ದಾಳಿಯಲ್ಲಿ ಕನಿಷ್ಠ ಮೂವರು ಮೃತಪಟ್ಟಿದ್ದಾರೆ ಮತ್ತು ಎಂಟು ಜನರು ಗಾಯಗೊಂಡಿದ್ದಾರೆ ಎಂದು ಇಸ್ರೇಲ್ನ ಮ್ಯಾಗೆನ್ ಡೇವಿಡ್ ಝಾಫೊನ್ ರಕ್ಷಣಾ ಘಟಕ ಹೇಳಿದೆ.
ಇರಾನ್ ದಾಳಿಯಿಂದ ಇಸ್ರೇಲ್ನ ದಕ್ಷಿಣದಲ್ಲಿರುವ ವಸತಿ ಕಟ್ಟಡಕ್ಕೆ ಭಾರೀ ಹಾನಿಯಾಗಿದೆ ಎಂದು ತುರ್ತು ಪ್ರತಿಕ್ರಿಯೆ ತಂಡ ಹೇಳಿದೆ.
Next Story





