Gaza | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 3 ಮಂದಿ ಮೃತ್ಯು

Photo Credit : aljazeera.com
ಗಾಝಾ, ಜೂ. 3: ಗಾಝಾದಲ್ಲಿ ಬುಧವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ಗಾಝಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯ ಗಾಝಾ ಪಟ್ಟಿಯ ಮುಘರಾಕ ಪ್ರದೇಶದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಇಸ್ರೇಲ್ ನಿಯಂತ್ರಣದಲ್ಲಿರುವ ಪ್ರದೇಶದಲ್ಲಿ ಶಂಕಾಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದ ವ್ಯಕ್ತಿಯ ಮೇಲೆ ಗುಂಡು ಹಾರಿಸಿರುವುದಾಗಿ ಇಸ್ರೇಲಿ ಮಿಲಿಟರಿ ತಿಳಿಸಿದೆ.
ಮಘಾಜಿ ನಿರಾಶ್ರಿತರ ಶಿಬಿರದ ಸಮೀಪ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಸಹೋದರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Next Story




