Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶುಲ್ಕ ಪಾವತಿಸದಿದ್ದರೆ ಬಂಧನ, ವಲಸಿಗರಿಗೆ...

ಶುಲ್ಕ ಪಾವತಿಸದಿದ್ದರೆ ಬಂಧನ, ವಲಸಿಗರಿಗೆ ಇಟಲಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Sept 2023 11:16 PM IST
share
ಶುಲ್ಕ ಪಾವತಿಸದಿದ್ದರೆ ಬಂಧನ, ವಲಸಿಗರಿಗೆ ಇಟಲಿ ಸೂಚನೆ

ರೋಮ್ : ಇಟಲಿಯಲ್ಲಿ ಆಶ್ರಯ ಕೋರುವವರು 5,259 ಡಾಲರ್ ಶುಲ್ಕ ಪಾವತಿಸದಿದ್ದರೆ ಅವರನ್ನು ಬಂಧಿಸಲಾಗುವುದು. ಶುಲ್ಕ ಪಾವತಿಸಿದವರಿಗೆ ಆಶ್ರಯ ಮತ್ತು ಭದ್ರತೆ ಒದಗಿಸುವ ಕೋರಿಕೆಯನ್ನು ಪರಿಶೀಲಿಸಲಾಗುತ್ತದೆ ಎಂದು ಇಟಲಿ ಸರಕಾರ ಶುಕ್ರವಾರ ಘೋಷಿಸಿದೆ.

ವಲಸಿಗರ ಆಗಮನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನೇತೃತ್ವದ ಸಮ್ಮಿಶ್ರ ಸರಕಾರ, ವಲಸಿಗರನ್ನು ಸಂಭವನೀಯ ವಾಪಸಾತಿಗೂ ಮುನ್ನ ಇರಿಸಲು ದೇಶದೆಲ್ಲೆಡೆ ಬಂಧನ ಕೇಂದ್ರಗಳನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಜತೆಗೆ, ವಲಸಿಗರನ್ನು ಬಂಧನದಲ್ಲಿಡುವ ಅವಧಿಯನ್ನು 3 ತಿಂಗಳಿನಿಂದ 18 ತಿಂಗಳಿಗೆ ಹೆಚ್ಚಿಸಲೂ ಸರಕಾರ ನಿರ್ಧರಿಸಿದೆ.

ಇದುವರೆಗೆ, ಇಟಲಿಯಲ್ಲಿ ಆಶ್ರಯಕೋರಿ ಅರ್ಜಿ ಸಲ್ಲಿಸಿದವರು ತಮ್ಮ ಅರ್ಜಿಯ ಪರಿಶೀಲನೆ ಮುಗಿಯುವವರೆಗೆ ದೇಶದೊಳಗೆ ಮುಕ್ತವಾಗಿ ಪ್ರಯಾಣಿಸಬಹುದು. ಆದರೆ ಶುಕ್ರವಾರ ಪ್ರಕಟವಾದ ಆದೇಶದಂತೆ `ಜಾಮೀನು ಶುಲ್ಕ' ಪಾವತಿಸದ ವಲಸಿಗರನ್ನು ಬಂಧಿಸಲಾಗುತ್ತದೆ.

ಆದರೆ ಸರಕಾರದ ನಡೆಯನ್ನು ಮಾನವ ಹಕ್ಕುಗಳ ಸಂಘಟನೆ ಟೀಕಿಸಿದೆ. `ಇದು ಹಾಸ್ಯಾಸ್ಪದವಾಗಿದೆ. ಅಷ್ಟೊಂದು ಶುಲ್ಕ ಪಾವತಿಸಲು ಅವರಿಂದ ಸಾಧ್ಯವೇ? ವಲಸಿಗರ ಬಂಧನವನ್ನು ಸಹಜ ಪ್ರಕ್ರಿಯೆಯಾಗಿಸಲು ಸರಕಾರ ಬಯಸಿದೆ' ಎಂದು ವಲಸಿಗರ ಹಕ್ಕಿಗಾಗಿ ಕಾರ್ಯನಿರ್ವಹಿಸುತ್ತಿರುವ `ಅಸೋಸಿಯೇಷನ್ ಫಾರ್ ಜ್ಯುಡಿಷಿಯಲ್ ಸ್ಟಡೀಸ್ ಆನ್ ಇಮಿಗ್ರೇಷನ್'ನ ಸದಸ್ಯೆ ಅನ್ನಾ ಬ್ರಾಂಬಿಲ್ಲ ಖಂಡಿಸಿದ್ದಾರೆ.

ಈಗ ಇಟಲಿಯಲ್ಲಿ 10 ವಾಪಸಾತಿ ಕೇಂದ್ರಗಳಿದ್ದು ಇದರಲ್ಲಿ ಕೇವಲ 619 ವಲಸಿಗರನ್ನು ಇರಿಸಬಹುದಾಗಿದೆ. ದೇಶದ 20 ಪ್ರಾಂತಗಳಲ್ಲೂ ಕನಿಷ್ಟ 1 ವಾಪಸಾತಿ ಕೇಂದ್ರ ಆರಂಭಿಸುವುದು ಸರಕಾರದ ಉದ್ದೇಶವಾಗಿದೆ. ಈ ವರ್ಷದ ಸೆಪ್ಟಂಬರ್ 20ರವರೆಗೆ ಇಟಲಿಗೆ 1,32,867 ವಲಸಿಗರು ದೋಣಿಯ ಮೂಲಕ ಆಗಮಿಸಿದ್ದು ಕಳೆದ ವರ್ಷ ಇದೇ ಅವಧಿಯಲ್ಲಿ 69,498 ವಲಸಿಗರು ಆಗಮಿಸಿದ್ದರು ಎಂದು ಆಂತರಿಕ ಸಚಿವಾಲಯ ಮಾಹಿತಿ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X