ಕೆನ್ಯಾ: ಭೂಕುಸಿತದಲ್ಲಿ ಕನಿಷ್ಠ 26 ಮಂದಿ ಮೃತ್ಯು

PC : AP \ PTI
ನೈರೋಬಿ, ನ.3: ಪಶ್ಚಿಮ ಕೆನ್ಯಾದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 26ಕ್ಕೇರಿದ್ದು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಮಳೆ ಮತ್ತು ಪ್ರವಾಹ ಅಡ್ಡಿಯಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿದ ವರದಿ ಹೇಳಿದೆ.
ಇನ್ನೂ 25 ಮಂದಿ ನಾಪತ್ತೆಯಾಗಿದ್ದು ಜಲಾವೃತಗೊಂಡ ಪ್ರದೇಶಗಳಿಂದ ಸಾವಿರಾರು ಜನರನ್ನು ಸ್ಥಳಾಂತರಿಸಲಾಗಿದೆ. ಶನಿವಾರ ಸುರಿದ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಪ್ರಮುಖ ರಸ್ತೆಗಳಿಗೆ ಹಾನಿಯಾಗಿ ಸೇತುವೆಗಳು ಕೊಚ್ಚಿ ಹೋಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಸೇನೆಯು 4 ಯುದ್ಧ ವಿಮಾನಗಳನ್ನು ನಿಯೋಜಿಸಿದೆ. ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಯಗೊಂಡ 30ಕ್ಕೂ ಅಧಿಕ ಜನರ ವೈದ್ಯಕೀಯ ವೆಚ್ಚವನ್ನು ಭರಿಸುವುದಾಗಿ ಮತ್ತು ಮನೆ ಕಳೆದುಕೊಂಡವರಿಗೆ ಮರು ವಸತಿಯ ವ್ಯವಸ್ಥೆ ಮಾಡುವುದಾಗಿ ಸರಕಾರ ಘೋಷಿಸಿದೆ.
Next Story





