ಕೆನಡಾದಲ್ಲಿ ಗ್ಯಾಂಗ್ ವಾರ್ ನಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ಸುಖ ದುನೆಕೆ ಹತ್ಯೆ: ವರದಿ

Photo: Twiter@NDTV
ಟೊರಾಂಟೊ : ಖಾಲಿಸ್ತಾನಿ ಪ್ರತ್ಯೇಕತಾವಾದಿ ಸುಖ ದುನೆಕೆ ಕೆನಡಾದಲ್ಲಿ ಗ್ಯಾಂಗ್ ನಡುವಿನ ಹೊಡೆದಾಟದಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ದುನೆಕೆ ಕೆನಡಾದಲ್ಲಿ ಖಾಲಿಸ್ತಾನ್ ಚಳವಳಿಯ ಭಾಗವಾಗಿದ್ದ. ದುನೆಕೆ ಕೆನಡಾ ಮೂಲದ ದರೋಡೆಕೋರ ಅರ್ಶ್ದೀಪ್ ಸಿಂಗ್ ಅಲಿಯಾಸ್ ಅರ್ಶ್ ದಲಾ ನೊಂದಿಗೆ ನಿಕಟ ಸಂಬಂಧ ಹೊಂದಿದ್ದ.
ಕೆನಡಾದ ನೆಲದಲ್ಲಿ ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೂ ಭಾರತೀಯ ಸರಕಾರಿ ಏಜೆಂಟರಿಗೂ ಸಂಬಂಧವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಈ ವಾರದ ಆರಂಭದಲ್ಲಿ ಹೌಸ್ ಆಫ್ ಕಾಮನ್ಸ್ ಗೆ ತಿಳಿಸಿದ ನಂತರ ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ತಲೆದೋರಿರುವ ನಡುವೆ ದುನೆಕೆ ಹತ್ಯೆಯಾಗಿದೆ.
ಟ್ರುಡೊ ಅವರ ಆರೋಪದ ನಂತರ ಭಾರತ ಹಾಗೂ ಕೆನಡಾ ದೇಶಗಳು ಪರಸ್ಪರದ ಹಿರಿಯ ರಾಜತಾಂತ್ರಿಕರನ್ನು ಹೊರಹಾಕಿವೆ.
ಭಾರತವು ಕೆನಡಾ ಪ್ರಧಾನಿ ಆರೋಪಗಳನ್ನು ನಿರಾಕರಿಸಿದ್ದು, ಅವುಗಳನ್ನು "ಅಸಂಬದ್ಧ" ಮತ್ತು "ಪ್ರಚೋದಿತ" ಎಂದು ಕರೆದಿದೆ.
Next Story