ದ.ಕೊರಿಯಾದಲ್ಲಿ ಭೂಕುಸಿತ : ಓರ್ವ ಮೃತ್ಯು ; ಮೂವರು ನಾಪತ್ತೆ

PC | REUTERS
ಸಿಯೋಲ್: ದಕ್ಷಿಣ ಕೊರಿಯಾದಲ್ಲಿ ನಿರಂತರ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ನಾಪತ್ತೆಯಾಗಿರುವುದಾಗಿ ರಕ್ಷಣಾ ತಂಡದ ಅಧಿಕಾರಿಗಳು ಶನಿವಾರ ಹೇಳಿದ್ದಾರೆ.
ದಕ್ಷಿಣ ಸ್ಯಾಂಚೆಯೊಂಗ್ ನಗರದಲ್ಲಿ ಭೂಕುಸಿತದಿಂದ ಎರಡು ಮನೆಗಳು ನೆಲದಡಿ ಹೂತುಹೋಗಿದ್ದು ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಇತರ ಮೂವರು ನಾಪತ್ತೆಯಾಗಿದ್ದು ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಈ ಪ್ರದೇಶದ ಜನರಿಗೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಬುಧವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕನಿಷ್ಠ 4 ಮಂದಿ ಮೃತಪಟ್ಟಿದ್ದು 7000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ಹೇಳಿಕೆ ತಿಳಿಸಿದೆ.
Next Story





