USA | FIFA ವಿಶ್ವಕಪ್ ಆತಿಥೇಯ ನಗರಗಳಲ್ಲಿ ಹಿಂಸಾಚಾರ; 9 ಮಂದಿಗೆ ಗಾಯ

ಸಾಂದರ್ಭಿಕ ಚಿತ್ರ
ನ್ಯೂಯಾರ್ಕ್, ಜೂ. 8: ಅಮೆರಿಕದಲ್ಲಿ ವಿಶ್ವಕಪ್ ಫುಟ್ಬಾಲ್ ಟೂರ್ನಿಯ ಪಂದ್ಯಗಳನ್ನು ಆಯೋಜಿಸುವ ಎರಡು ನಗರಗಳಲ್ಲಿ ನಡೆದ ಪ್ರತ್ಯೇಕ ಹಿಂಸಾಚಾರದ ಘಟನೆಗಳಲ್ಲಿ ಕನಿಷ್ಠ 9 ಮಂದಿ ಗಾಯಗೊಂಡಿದ್ದು, ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವ ಅಭಿಮಾನಿಗಳ ಸುರಕ್ಷತೆಯ ಬಗ್ಗೆ ಕಳವಳ ಹೆಚ್ಚಿಸಿದೆ.
ನ್ಯೂಯಾರ್ಕ್ನ ಪೆನ್ ಸ್ಟೇಷನ್ ನಲ್ಲಿ ರವಿವಾರ ನಡೆದ ಚೂರಿ ಇರಿತದ ಘಟನೆಯಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ಶಂಕಿತ ಆರೋಪಿಯನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇನ್ನು, ಕ್ಯಾನ್ಸಸ್ ನಗರದಲ್ಲಿ ನಡೆದ ಗುಂಡಿನ ದಾಳಿ ಘಟನೆಯಲ್ಲಿ ಮೂವರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಈ ಎರಡೂ ನಗರಗಳಲ್ಲಿ ವಿಶ್ವಕಪ್ ಫುಟ್ ಬಾಲ್ ಟೂರ್ನಿಯ ಲೀಗ್ ಪಂದ್ಯಗಳು ನಡೆಯಲಿವೆ.
Next Story




