Mexico: ಫುಟ್ಬಾಲ್ ಪಂದ್ಯದ ಸಂದರ್ಭ ಶೂಟೌಟ್ನಲ್ಲಿ 11 ಮೃತ್ಯು

ಸಾಂದರ್ಭಿಕ ಚಿತ್ರ | Photo Credit : freepik.com
ಮೆಕ್ಸಿಕೋ ಸಿಟಿ, ಜ.26: ಮಧ್ಯ ಮೆಕ್ಸಿಕೋದ ಗ್ವಾನಾಜುವಾಟೊ ರಾಜ್ಯದ ಸಲಮ್ಯಾಂಕ ನಗರದಲ್ಲಿ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ಮೈದಾನದಲ್ಲಿ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಕನಿಷ್ಠ 11 ಮಂದಿ ಸಾವನ್ನಪ್ಪಿರುವುದಾಗಿ ನಗರದ ಮೇಯರ್ರನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಸಲಮ್ಯಾಂಕ ನಗರದ ಲೊಮ ಡೆ ಫ್ಲೋರ್ಸ್ ಪ್ರದೇಶದಲ್ಲಿ ಹವ್ಯಾಸಿ ಫುಟ್ಬಾಲ್ ಪಂದ್ಯ ನಡೆಯುತ್ತಿದ್ದಾಗ ದಾಳಿ ನಡೆದಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚುವ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story





