ಬಾಲಿ | ಮಿನಿಬಸ್ ಅಪಘಾತದಲ್ಲಿ 5 ಚೀನೀ ಪ್ರವಾಸಿಗರ ಮೃತ್ಯು

Photo Credit : AP
ಜಕಾರ್ತ, ನ.14: ಇಂಡೋನೇಶ್ಯಾದ ಬಾಲಿ ದ್ವೀಪದಲ್ಲಿ ಚೀನಾದ ಪ್ರವಾಸಿಗರಿದ್ದ ಮಿನಿ ಬಸ್ಸು ಅಪಘಾತಕ್ಕೀಡಾಗಿದ್ದು 5 ಮಂದಿ ಸಾವನ್ನಪ್ಪಿದ್ದಾರೆ. ಇತರ 8 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬಾಲಿ ದ್ವೀಪದ ದಕ್ಷಿಣದಿಂದ ಉತ್ತರದ ಕಡೆಗೆ ಪ್ರವಾಸಿಕರನ್ನು ಕರೆದೊಯ್ಯುತ್ತಿದ್ದ ಬಸ್ಸು ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಮರಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ. ಬಸ್ಸಿನ ಚಾಲಕನನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.
Next Story





