ರಶ್ಯದಿಂದ ಕ್ಷಿಪಣಿ ಮತ್ತು ಡ್ರೋನ್ ದಾಳಿ : ಕೀವ್ನಲ್ಲಿ 17 ಮಂದಿ ಮೃತ್ಯು ; ವ್ಯಾಪಕ ಹಾನಿ

Photo Credit : AP, PTI
ಕೀವ್, ಜು.2: ಉಕ್ರೇನ್ ರಾಜಧಾನಿ ಕೀವ್ ಮೇಲೆ ರಶ್ಯ ಗುರುವಾರ ಬೆಳಗ್ಗೆ ಭಾರಿ ಪ್ರಮಾಣದ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿದ್ದು, ಕನಿಷ್ಠ 11 ಜನರು ಮೃತಪಟ್ಟಿದ್ದಾರೆ ಮತ್ತು 54ಕ್ಕೂ ಹೆಚ್ಚು ಜನರು ಗಾಯಗೊಂಡಿರುವುದಾಗಿ ವರದಿಯಾಗಿದೆ.
ಬ್ಯಾಲಿಸ್ಟಿಕ್ ಮತ್ತು ಕ್ರೂಸ್ ಕ್ಷಿಪಣಿಗಳು ಹಾಗೂ ಡ್ರೋನ್ಗಳ ಮೂಲಕ ನಡೆಸಲಾದ ಈ ದಾಳಿಯು ನಗರದಾದ್ಯಂತ ಹಲವು ಕಟ್ಟಡಗಳು ಮತ್ತು ನಾಗರಿಕ ಮೂಲಸೌಕರ್ಯಗಳನ್ನು ಧ್ವಂಸಗೊಳಿಸಿದೆ. ಉಕ್ರೇನ್ ಅಧಿಕಾರಿಗಳು ದಾಳಿಯ ಮೊದಲ ಮುನ್ಸೂಚನೆ ನೀಡಿದ ತಕ್ಷಣವೇ, ಅನೇಕ ನಿವಾಸಿಗಳು ರಕ್ಷಣೆಗಾಗಿ ಮೆಟ್ರೋ ನಿಲ್ದಾಣಗಳಲ್ಲಿ ಆಶ್ರಯ ಪಡೆದರು.
ಈ ದಾಳಿಯಲ್ಲಿ 11 ಜನರು ಸಾವನ್ನಪ್ಪಿದ್ದಾರೆ ಮತ್ತು 20 ವಸತಿ ಕಟ್ಟಡಗಳು ಹಾನಿಗೊಳಗಾಗಿವೆ. ಇಬ್ಬರು ಮಕ್ಕಳು ಸೇರಿದಂತೆ 54 ಜನರು ಗಾಯಗೊಂಡಿದ್ದಾರೆ . ನಗರದಾದ್ಯಂತ ಪ್ರಮುಖವಾಗಿ ವಸತಿ ಕಟ್ಟಡಗಳು ಮತ್ತು ನಾಗರಿಕ ಮೂಲಸೌಕರ್ಯಗಳು ಸೇರಿದಂತೆ 30 ಸ್ಥಳಗಳಲ್ಲಿ ಹಾನಿ ದಾಖಲಾಗಿದೆ ಎಂದು ಆಂತರಿಕ ಸಚಿವ ಇಹೋರ್ ಕ್ಲೈಮೆಂಕೊ ತಿಳಿಸಿದ್ದಾರೆ.
Next Story




