Bangladesh | ಹಸೀನಾ ಅವರ ತವರು ಜಿಲ್ಲೆಯಲ್ಲಿ ಮೊಬೈಲ್ ಬ್ಯಾಂಕಿಂಗ್ ವಹಿವಾಟಿಗೆ ನಿರ್ಬಂಧ

ಶೇಖ್ ಹಸೀನಾ | Photo Credit : PTI
ಢಾಕಾ, ನ. 27: ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ದೇಶಕ್ಕೆ ಮರಳುವ ಯೋಜನೆಯ ವಿರುದ್ಧ ಹೆಚ್ಚುತ್ತಿರುವ ರಾಜಕೀಯ ಅಶಾಂತಿಯ ನಡುವೆ, ಬಾಂಗ್ಲಾದೇಶದ ಗೋಪಾಲ್ಗಂಜ್ ಜಿಲ್ಲೆಯಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆಗಳ ಕೆಲವು ಖಾತೆಗಳ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.
ಮೊಬೈಲ್ ಹಣಕಾಸು ಸೇವೆಗಳನ್ನು ಒದಗಿಸುವ ಕೆಲವು ಸಂಸ್ಥೆಗಳು ಭದ್ರತಾ ಕಾರಣಗಳನ್ನು ಮುಂದಿಟ್ಟು ಗ್ರಾಹಕರ ಖಾತೆಗಳ ವಹಿವಾಟುಗಳಿಗೆ ನಿರ್ಬಂಧ ವಿಧಿಸಿವೆ. ಆದರೆ ಇಡೀ ಜಿಲ್ಲೆಯಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಕೇಂದ್ರ ಬ್ಯಾಂಕ್ ಆದೇಶ ನೀಡಿಲ್ಲ ಎಂದು ವರದಿಗಳು ತಿಳಿಸಿವೆ.
ಇದೇ ವೇಳೆ, ಭದ್ರತಾ ಕಾರಣಗಳಿಂದಾಗಿ ನ. 15ರಂದು ಆದೇಶಿಸಿದ್ದ ರೈಲು ಸೇವೆಗಳ ಸ್ಥಗಿತವೂ ಅನಿರ್ದಿಷ್ಟಾವಧಿಯವರೆಗೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story




