Nepal | ನೂತನ ಸರ್ಕಾರದ ವಿರುದ್ಧ ಪ್ರತಿಭಟನೆ

ಸಾಂದರ್ಭಿಕ ಚಿತ್ರ | Photo Credit : PTI
ಕಠ್ಮಂಡು, ಎ.22: ನೇಪಾಳದಲ್ಲಿ ಬಾಲೆನ್ ಶಾ ನೇತೃತ್ವದಲ್ಲಿ ಇತ್ತೀಚೆಗೆ ಅಧಿಕಾರಕ್ಕೆ ಬಂದಿರುವ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳು, ರಾಜಕೀಯ ಪಕ್ಷಗಳು ಹಾಗೂ ನಾಗರಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿರುವುದಾಗಿ ವರದಿಯಾಗಿದೆ.
ರಾಜಧಾನಿ ಕಠ್ಮಂಡು ಹಾಗೂ ಇತರ ನಗರಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ. ಭಾರತದಿಂದ ಆಮದಾಗುವ 100 ರೂ.ಗಿಂತ ಅಧಿಕ ಮೌಲ್ಯದ ಸರಕುಗಳಿಗೆ ಕಸ್ಟಮ್ಸ್ ಸುಂಕ ವಿಧಿಸುವ ಸರ್ಕಾರದ ಹೊಸ ನಿಯಮವನ್ನು ವಿರೋಧಿಸಿ ಪ್ರತಿಭಟನೆ ನಡೆಯುತ್ತಿದೆ. ಗಡಿಭಾಗದ ಸಮೀಪ ನೆಲೆಸಿರುವ ಜನರು ದೈನಂದಿನ ಬಳಕೆಯ ವಸ್ತುಗಳನ್ನು ಗಡಿಯಾಚೆಯಿಂದ ಖರೀದಿಸುತ್ತಾರೆ. ಹೊಸ ನಿಯಮವು ತಮ್ಮ ಖರ್ಚುಗಳನ್ನು ಹೆಚ್ಚಿಸುತ್ತದೆ ಮತ್ತು ಜೀವನವನ್ನು ಕಷ್ಟಕರವಾಗಿಸುತ್ತದೆ ಎಂಬ ಅಸಮಾಧಾನ ಹೆಚ್ಚಿದೆ.
ರಾಜಕೀಯ ಪಕ್ಷಗಳಿಗೆ ಸಂಬಂಧಿಸಿದ ವಿದ್ಯಾರ್ಥಿ ಸಂಘಟನೆಗಳನ್ನು ನಿಷೇಧಿಸುವ ನಿರ್ಧಾರದ ಬಗ್ಗೆ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವುದಾಗಿ ವರದಿಯಾಗಿದೆ.
Next Story




