ನೇಪಾಳ | ಸಂಸತ್ ಕಟ್ಟಡಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು

Photo credit: X/@RONBupdates
ಕಠ್ಮಂಡು : ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡುವ ಕೆಲವೇ ನಿಮಿಷಗಳ ಮೊದಲು, ಪ್ರತಿಭಟನಾಕಾರರು ಸಂಸತ್ತಿನ ಆವರಣಕ್ಕೆ ನುಗ್ಗಿ ಕಟ್ಟಡವೊಂದಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ವರದಿಯಾಗಿದೆ.
ನೇಪಾಳದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲಿನ ನಿಷೇಧವನ್ನು ತೆರವುಗೊಳಿಸಿದರೂ ಪ್ರತಿಭಟನೆ ಮುಂದುವರಿದಿತ್ತು. ಭಕ್ತಪುರದ ಬಾಲ್ಕೋಟ್ ಪ್ರದೇಶದಲ್ಲಿರುವ ಓಲಿ ಅವರ ನಿವಾಸ ಮತ್ತು ಇತರ ಹಿರಿಯ ನಾಯಕರ ಮನೆಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ.
ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ನೇಪಾಳ ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ. ಸಾವಿರಾರು ಪ್ರತಿಭಟನಾಕಾರರು ಸಂಸತ್ತಿಗೆ ನುಗ್ಗಿರುವ ವೀಡಿಯೊಗಳು ವೈರಲ್ ಆಗಿದೆ.
Next Story





