ಅಮೆರಿಕದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ: ನ್ಯೂಯಾರ್ಕ್, ವಾಷಿಂಗ್ಟನ್ ಗೆ ಹೆಚ್ಚುವರಿ ಪಡೆ ರವಾನೆ

PC : NDTV
ವಾಷಿಂಗ್ಟನ್: ಇರಾನ್ ಮೇಲಿನ ಬಾಂಬ್ ದಾಳಿಯ ಬಳಿಕ ಅಮೆರಿಕದ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದ್ದು ನ್ಯೂಯಾರ್ಕ್ ಮತ್ತು ವಾಷಿಂಗ್ಟನ್ ನಲ್ಲಿ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.
ನಗರಾದ್ಯಂತ ಧಾರ್ಮಿಕ, ಸಾಂಸ್ಕೃತಿಕ ಮತ್ತು ರಾಜತಾಂತ್ರಿಕ ಸ್ಥಳಗಳಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿರುವುದಾಗಿ ನ್ಯೂಯಾರ್ಕ್ ಪೊಲೀಸ್ ಇಲಾಖೆ ಹೇಳಿದೆ. ವಾಷಿಂಗ್ಟನ್ ಮತ್ತು ಲಾಸ್ ಏಂಜಲೀಸ್ ನಗರದಾದ್ಯಂತ ಧಾರ್ಮಿಕ ಕೇಂದ್ರಗಳಿಗೆ ಭದ್ರತೆ ಹೆಚ್ಚಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
Next Story





