ನೈಜೀರಿಯಾ: ದೋಣಿ ಮಗುಚಿ ಕನಿಷ್ಠ 24 ಮಂದಿ ಮೃತ್ಯು

Photo Credit : AP
ಅಬುಜಾ, ನ.22: ದಕ್ಷಿಣ ನೈಜೀರಿಯಾದ ಬಯೇಲ್ಸಾ ರಾಜ್ಯದಲ್ಲಿ ಅಂತ್ಯಕ್ರಿಯೆಗೆ ತೆರಳುತ್ತಿದ್ದವರನ್ನು ಕರೆದೊಯ್ಯುತ್ತಿದ್ದ ದೋಣಿಯೊಂದು ಶುಕ್ರವಾರ ಮಗುಚಿ ಬಿದ್ದ ಪರಿಣಾಮ ಕನಿಷ್ಠ 24 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಶವಸಂಸ್ಕಾರದ ವಿಧಿವಿಧಾನಗಳಿಗಾಗಿ ಪ್ರಯಾಣಿಕರನ್ನು ಒಂದು ಸಮುದಾಯದಿಂದ ಮತ್ತೊಂದು ಸಮುದಾಯಕ್ಕೆ ಕರೆದೊಯ್ಯುತ್ತಿದ್ದಾಗ ದೋಣಿ ಮುಳುಗಿದೆ. ಘಟನೆಯಲ್ಲಿ ಮತ್ತೊಂದು 24 ಮಂದಿಯನ್ನು ರಕ್ಷಿಸಲಾಗಿದ್ದು, ಅವರಿಗೆ ವೈದ್ಯಕೀಯ ನೆರವು ನೀಡಲಾಗಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ರಾಷ್ಟ್ರೀಯ ತುರ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.
ದೋಣಿಯಲ್ಲಿ ತಾಂತ್ರಿಕ ದೋಷ ಉಂಟಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ.
Next Story




